ಏ 6: ಜಗತ್ತಿನ ಯಾವ ರಾಷ್ಟ್ರದಲ್ಲಿ ಕೋವಿಡ್ ಗುಣಮುಖರ ಸಂಖ್ಯೆ ಎಷ್ಟು?

ನವದೆಹಲಿ, ಏಪ್ರಿಲ್ 6: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಬಹುಪಾಲು ನಿಯಂತ್ರಣ ಬಂದಿದೆ. ಅದಾಗ್ಯೂ, ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 494,503,191ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,185,114 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 430,025,229 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 25 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿವೆ.

ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಮುಗಿದಾಗಿದೆ. ದೇಶದಲ್ಲಿ ಈಗಾಗಲೇ ದೈನಂದಿನ ಸೋಂಕಿತ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಏಪ್ರಿಲ್ 6ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 1,086 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 1,086 ಮಂದಿಗೆ ಕೊವಿಡ್

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ತಗ್ಗಿದೆ. ಭಾರತದಲ್ಲಿ ಒಂದು ದಿನದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದು ಸಾವಿರಕ್ಕೆ ತಗ್ಗಿದೆ. ಕಳೆದ 24 ಗಂಟೆಗಳಲ್ಲಿ 1086 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 72 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 1,198 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 43,030,925ಕ್ಕೆ ಏರಿಕೆಯಾಗಿದೆ. ಈ ಪೈಕಿ 42,497,567 ಸೋಂಕಿತರು ಗುಣಮುಖರಾಗಿದ್ದರೆ, 521,518 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 11,840 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 494,503,191 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,185,114 ಮಂದಿ ಪ್ರಾಣ ಬಿಟ್ಟಿದ್ದಾರೆ. 430,025,229 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 58,292,848 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,19,00,012

ಭಾರತ: 4,30,30,925

ಬ್ರೆಜಿಲ್: 3,00,40,129

ಫ್ರಾನ್ಸ್: 2,62,28,521

ಜರ್ಮನಿ: 2,19,56,521

ಯುಕೆ: 2,14,10,305

ರಷ್ಯಾ: 1,79,26,104

ಟರ್ಕಿ: 1,49,19,591

ಇಟಲಿ: 1,49,19,591

ದಕ್ಷಿಣ ಕೊರಿಯಾ: 1,45,53,644

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,09,390

ಬ್ರೆಜಿಲ್: 6,60,586

ಭಾರತ: 5,21,518

ರಷ್ಯಾ: 3,70,311

ಮೆಕ್ಸಿಕೋ: 3,23,318

ಪೆರು: 2,12,372

ಯುಕೆ: 1,66,148

ಇಟಲಿ: 1,60,103

ಇಂಡೋನೇಷಿಯಾ: 1,55,421

ಫ್ರಾನ್ಸ್: 1,42,784

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 6,59,68,467

ಭಾರತ: 4,24,97,567

ಬ್ರೆಜಿಲ್: 2,88,92,353

ಫ್ರಾನ್ಸ್: 2,36,15,663

ಯುಕೆ: 1,93,35,978

ಜರ್ಮನಿ: 1,76,75,700

ರಷ್ಯಾ: 1,70,35,336

ಟರ್ಕಿ: 1,45,98,047

ಅರ್ಜೆಂಟೀನಾ: 88,72,658

ಇರಾನ್: 68,95,961

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+