ಏಪ್ರಿಲ್ 9ರಂದು ಜಗತ್ತಿನ ಯಾವ ರಾಷ್ಟ್ರದಲ್ಲಿ ಕೋವಿಡ್ ಗುಣಮುಖರ ಸಂಖ್ಯೆ ಎಷ್ಟು?
ನವದೆಹಲಿ, ಏಪ್ರಿಲ್ 9: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಬಹುಪಾಲು ನಿಯಂತ್ರಣ ಬಂದಿದೆ. ಅದಾಗ್ಯೂ, ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 497,937,844ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,200,046 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 433,571,672 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 35 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿವೆ.
covishield booster dose price : ಏಪ್ರಿಲ್ 10ರಿಂದ ನೀವು ಪಡೆಯುವ ಬೂಸ್ಟರ್ ಡೋಸ್ ಲಸಿಕೆ ಬೆಲೆ ಎಷ್ಟು?
ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಮುಗಿದಾಗಿದೆ. ದೇಶದಲ್ಲಿ ಈಗಾಗಲೇ ದೈನಂದಿನ ಸೋಂಕಿತ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ.

ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಏಪ್ರಿಲ್ 9ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 1,150 ಮಂದಿಗೆ ಕೊವಿಡ್
ಭಾರತದಲ್ಲಿ ಪತ್ತೆಯಾಗಿರುವ ಕೊರೊನಾವೈರಸ್ ಹೊಸ ರೂಪಾಂತರಿ ಎಕ್ಸ್ಇ ತಳಿಯ ಭೀತಿ ಹೆಚ್ಚಾಗಿದೆ. ಇದರ ಮಧ್ಯೆ ದೇಶದಲ್ಲಿ ಮತ್ತೊಮ್ಮೆ ಸೋಂಕಿತ ಪ್ರಕರಣಗಳ ಸಂಖ್ಯೆಯೂ ಒಂದು ಸಾವಿರದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ 1,150 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 84 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 1,194 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 43,034,217ಕ್ಕೆ ಏರಿಕೆಯಾಗಿದೆ. ಈ ಪೈಕಿ 42,501,196 ಸೋಂಕಿತರು ಗುಣಮುಖರಾಗಿದ್ದರೆ, 521,686 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 11,335 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 497,937,844 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,200,046 ಮಂದಿ ಪ್ರಾಣ ಬಿಟ್ಟಿದ್ದಾರೆ. 433,571,672 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 58,166,126 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 8,20,34,738
ಭಾರತ: 4,30,34,217
ಬ್ರೆಜಿಲ್: 3,01,23,963
ಫ್ರಾನ್ಸ್: 2,66,98,031
ಜರ್ಮನಿ: 2,25,34,061
ಯುಕೆ: 2,19,49,830
ರಷ್ಯಾ: 1,79,69,431
ಇಟಲಿ: 1,51,73,707
ದಕ್ಷಿಣ ಕೊರಿಯಾ: 1,51,69,189
ಟರ್ಕಿ: 1,49,46,379

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 10,11,665
ಬ್ರೆಜಿಲ್: 6,61,182
ಭಾರತ: 5,21,686
ರಷ್ಯಾ: 3,71,169
ಮೆಕ್ಸಿಕೋ: 3,23,595
ಪೆರು: 2,12,438
ಯುಕೆ: 1,69,759
ಇಟಲಿ: 1,60,546
ಇಂಡೋನೇಷಿಯಾ: 1,55,556
ಫ್ರಾನ್ಸ್: 1,43,156

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 6,63,11,893
ಭಾರತ: 4,25,01,196
ಬ್ರೆಜಿಲ್: 2,90,01,370
ಫ್ರಾನ್ಸ್: 2,39,12,721
ಯುಕೆ: 1,95,31,820
ಜರ್ಮನಿ: 1,83,23,900
ರಷ್ಯಾ: 1,71,43,630
ಟರ್ಕಿ: 1,46,34,481
ಅರ್ಜೆಂಟೀನಾ: 88,80,138
ಇರಾನ್: 69,09,967
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications