Infographics: ಅ.10ರಂದು ಜಗತ್ತಿನಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ ಬಗ್ಗೆ ತಿಳಿಯಿರಿ
ನವದೆಹಲಿ, ಅಕ್ಟೋಬರ್ 10: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಕ್ರಮೇಣ ಏರಿಕೆ ಆಗುತ್ತಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 626,761,876ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,561,389 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 606,502,104 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.
ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಸಂಪೂರ್ಣ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಮೂರು ಸಾವಿರಕ್ಕಿಂತಲೂ ಕಡಿಮೆಯಾಗಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಅಕ್ಟೋಬರ್ 10ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 2,424 ಮಂದಿಗೆ ಕೊವಿಡ್
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,424 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 15 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 2,923 ಸೋಂಕಿತರು ಗುಣಮುಖರಾಗಿದ್ದಾರೆ. ಕೊರೊನಾವೈರಸ್ ಸೋಂಕಿತರ 24 ಗಂಟೆಗಳ ಕಥೆ ಹೀಗಾಗಿದೆ. ಇನ್ನು ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 44,614,437ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಇದುವರೆಗೂ 528,814 ಮಂದಿ ಕೋವಿಡ್-19 ಸೋಂಕಿನಿಂದಲೇ ಪ್ರಾಣ ಕಳೆದುಕೊಂಡಿದ್ದಾರೆ. 44,057,544 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರೆ, 28,079 ಸಕ್ರಿಯ ಪ್ರಕರಣಗಳಿವೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 626,761,876 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,561,389 ಮಂದಿ ಪ್ರಾಣ ಬಿಟ್ಟಿದ್ದಾರೆ. 606,502,104 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 13,698,383 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 9,85,55,072
ಭಾರತ: 4,46,14,437
ಫ್ರಾನ್ಸ್: 3,58,66,253
ಬ್ರೆಜಿಲ್ : 3,47,64,661
ಜರ್ಮನಿ: 3,39,48,632
ದಕ್ಷಿಣ ಕೊರಿಯಾ: 2,49,79,770
ಯುಕೆ: 2,37,35,273
ಇಟಲಿ: 2,28,15,736
ಜಪಾನ್: 2,15,52,357
ರಷ್ಯಾ: 2,12,18,993

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 10,87,880
ಬ್ರೆಜಿಲ್: 6,86,910
ಭಾರತ: 5,28,814
ರಷ್ಯಾ: 3,88,295
ಮೆಕ್ಸಿಕೋ: 3,30,202
ಪೆರು: 2,16,755
ಯುಕೆ: 1,90,888
ಇಟಲಿ: 1,77,519
ಇಂಡೋನೇಷಿಯಾ: 1,58,205
ಫ್ರಾನ್ಸ್: 1,55,422

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 9,57,29,329
ಭಾರತ: 4,40,57,544
ಫ್ರಾನ್ಸ್: 3,47,66,181
ಬ್ರೆಜಿಲ್: 3,39,05,120
ಜರ್ಮನಿ: 3,26,36,500
ಯುಕೆ: 2,33,89,038
ಇಟಲಿ: 2,21,30,326
ರಷ್ಯಾ: 2,04,39,043
ಜಪಾನ್: 2,04,31,529
ಸ್ಪೇನ್: 1,32,42,579
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications