Get Updates
Get notified of breaking news, exclusive insights, and must-see stories!

Infographics: ಅ.11ರಂದು ಜಗತ್ತಿನಲ್ಲಿ ಕೊರೊನಾವೈರಸ್ ಪಿಕ್ಚರ್ ಹೀಗಿದೆ

ನವದೆಹಲಿ, ಅಕ್ಟೋಬರ್ 11: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಕ್ರಮೇಣ ಏರಿಕೆ ಆಗುತ್ತಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 627,114,600ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,562,410 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 606,888,131 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಸಂಪೂರ್ಣ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಎರಡು ಸಾವಿರಕ್ಕಿಂತಲೂ ಕಡಿಮೆಯಾಗಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಅಕ್ಟೋಬರ್ 11ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 1,957 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 1,957 ಮಂದಿಗೆ ಕೊವಿಡ್

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,957 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 8 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 2,654 ಸೋಂಕಿತರು ಗುಣಮುಖರಾಗಿದ್ದಾರೆ. ಕೊರೊನಾವೈರಸ್ ಸೋಂಕಿತರ 24 ಗಂಟೆಗಳ ಕಥೆ ಹೀಗಾಗಿದೆ. ಇನ್ನು ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 44,616,394ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಇದುವರೆಗೂ 528,822 ಮಂದಿ ಕೋವಿಡ್-19 ಸೋಂಕಿನಿಂದಲೇ ಪ್ರಾಣ ಕಳೆದುಕೊಂಡಿದ್ದಾರೆ. 44,060,198 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರೆ, 27,374 ಸಕ್ರಿಯ ಪ್ರಕರಣಗಳಿವೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 627,114,600 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,562,410 ಮಂದಿ ಪ್ರಾಣ ಬಿಟ್ಟಿದ್ದಾರೆ. 606,888,131 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 13,664,059 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 9,85,72,011

ಭಾರತ: 4,46,16,394

ಫ್ರಾನ್ಸ್: 3,58,75,626

ಬ್ರೆಜಿಲ್ : 3,47,66,204

ಜರ್ಮನಿ: 3,41,21,168

ದಕ್ಷಿಣ ಕೊರಿಯಾ: 2,49,95,246

ಯುಕೆ: 2,37,35,273

ಇಟಲಿ: 2,28,30,825

ಜಪಾನ್: 2,15,52,357

ರಷ್ಯಾ: 2,12,18,993

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,87,976

ಬ್ರೆಜಿಲ್: 6,86,928

ಭಾರತ: 5,28,822

ರಷ್ಯಾ: 3,88,295

ಮೆಕ್ಸಿಕೋ: 3,30,208

ಪೆರು: 2,16,788

ಯುಕೆ: 1,90,888

ಇಟಲಿ: 1,77,570

ಇಂಡೋನೇಷಿಯಾ: 1,58,219

ಫ್ರಾನ್ಸ್: 1,55,535

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 9,57,73,910

ಭಾರತ: 4,40,60,198

ಫ್ರಾನ್ಸ್: 3,48,18,17,884

ಬ್ರೆಜಿಲ್: 3,39,26,118

ಜರ್ಮನಿ: 3,27,01,100

ಯುಕೆ: 2,33,94,134

ಇಟಲಿ: 2,21,49,828

ರಷ್ಯಾ: 2,04,39,043

ಜಪಾನ್: 2,04,31,529

ಸ್ಪೇನ್: 1,32,42,579

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+