
Infographics: ಅ.12ರಂದು ಜಗತ್ತಿನಲ್ಲಿ ಕೊರೊನಾವೈರಸ್ ಅಂಕಿ-ಅಂಶ ತಿಳಿಯಿರಿ
ನವದೆಹಲಿ, ಅಕ್ಟೋಬರ್ 12: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಕ್ರಮೇಣ ಏರಿಕೆ ಆಗುತ್ತಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 627,821,612ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,564,240 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 607,352,453 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.
Infographics: ಅ.11ರಂದು ಜಗತ್ತಿನಲ್ಲಿ ಕೊರೊನಾವೈರಸ್ ಪಿಕ್ಚರ್ ಹೀಗಿದೆ
ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಸಂಪೂರ್ಣ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಎರಡು ಸಾವಿರಕ್ಕಿಂತಲೂ ಕಡಿಮೆಯಾಗಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಅಕ್ಟೋಬರ್ 12ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 2,139 ಮಂದಿಗೆ ಕೊವಿಡ್
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,139 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 13 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 3,208 ಸೋಂಕಿತರು ಗುಣಮುಖರಾಗಿದ್ದಾರೆ. ಕೊರೊನಾವೈರಸ್ ಸೋಂಕಿತರ 24 ಗಂಟೆಗಳ ಕಥೆ ಹೀಗಾಗಿದೆ. ಇನ್ನು ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 44,618,533ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಇದುವರೆಗೂ 528,835 ಮಂದಿ ಕೋವಿಡ್-19 ಸೋಂಕಿನಿಂದಲೇ ಪ್ರಾಣ ಕಳೆದುಕೊಂಡಿದ್ದಾರೆ. 44,063,406 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರೆ, 26,292 ಸಕ್ರಿಯ ಪ್ರಕರಣಗಳಿವೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 627,821,612 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,564,240 ಮಂದಿ ಪ್ರಾಣ ಬಿಟ್ಟಿದ್ದಾರೆ. 607,352,453 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 13,904,919 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 9,86,08,431
ಭಾರತ: 4,46,18,533
ಫ್ರಾನ್ಸ್: 3,59,70,379
ಬ್ರೆಜಿಲ್ : 3,47,73,515
ಜರ್ಮನಿ: 3,42,57,916
ದಕ್ಷಿಣ ಕೊರಿಯಾ: 2,50,25,749
ಯುಕೆ: 2,37,35,273
ಇಟಲಿ: 2,28,96,742
ಜಪಾನ್: 2,16,10,500
ರಷ್ಯಾ: 2,12,32,963

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 10,88,471
ಬ್ರೆಜಿಲ್: 6,87,016
ಭಾರತ: 5,28,835
ರಷ್ಯಾ: 3,88,404
ಮೆಕ್ಸಿಕೋ: 3,30,209
ಪೆರು: 2,16,819
ಯುಕೆ: 1,90,888
ಇಟಲಿ: 1,77,650
ಇಂಡೋನೇಷಿಯಾ: 1,58,235
ಫ್ರಾನ್ಸ್: 1,55,620

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 9,58,56,007
ಭಾರತ: 4,40,63,406
ಫ್ರಾನ್ಸ್: 3,48,56,049
ಬ್ರೆಜಿಲ್: 3,39,37,059
ಜರ್ಮನಿ: 3,27,57,900
ಯುಕೆ: 2,33,99,054
ಇಟಲಿ: 2,21,98,173
ರಷ್ಯಾ: 2,04,70,552
ಜಪಾನ್: 2,04,35,458
ಸ್ಪೇನ್: 1,32,42,579
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)