Infographics: ಅ.13ರಂದು ಜಗತ್ತಿನಲ್ಲಿ ಕೊರೊನಾವೈರಸ್ ಅಂಕಿ-ಅಂಶ ತಿಳಿಯಿರಿ
ನವದೆಹಲಿ, ಅಕ್ಟೋಬರ್ 13: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಕ್ರಮೇಣ ಏರಿಕೆ ಆಗುತ್ತಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 628,505,275ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,566,340 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 607,767,196 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.
ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಸಂಪೂರ್ಣ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಎರಡು ಸಾವಿರಕ್ಕಿಂತಲೂ ಕಡಿಮೆಯಾಗಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಅಕ್ಟೋಬರ್ 13ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 2,786 ಮಂದಿಗೆ ಕೊವಿಡ್
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,786 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 12 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 2,557 ಸೋಂಕಿತರು ಗುಣಮುಖರಾಗಿದ್ದಾರೆ. ಕೊರೊನಾವೈರಸ್ ಸೋಂಕಿತರ 24 ಗಂಟೆಗಳ ಕಥೆ ಹೀಗಾಗಿದೆ. ಇನ್ನು ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 44,621,319ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಇದುವರೆಗೂ 528,847 ಮಂದಿ ಕೋವಿಡ್-19 ಸೋಂಕಿನಿಂದಲೇ ಪ್ರಾಣ ಕಳೆದುಕೊಂಡಿದ್ದಾರೆ. 44,065,963 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರೆ, 26,509 ಸಕ್ರಿಯ ಪ್ರಕರಣಗಳಿವೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 628,505,275 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,566,340 ಮಂದಿ ಪ್ರಾಣ ಬಿಟ್ಟಿದ್ದಾರೆ. 607,767,196 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 14,171,739 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 9,87,27,136
ಭಾರತ: 4,46,21,319
ಫ್ರಾನ್ಸ್: 3,60,38,327
ಬ್ರೆಜಿಲ್ : 3,47,77,993
ಜರ್ಮನಿ: 3,44,03,129
ದಕ್ಷಿಣ ಕೊರಿಯಾ: 2,50,52,677
ಯುಕೆ: 2,37,35,273
ಇಟಲಿ: 2,29,44,496
ಜಪಾನ್: 2,16,56,190
ರಷ್ಯಾ: 2,12,64,080

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 10,89,385
ಬ್ರೆಜಿಲ್: 6,87,076
ಭಾರತ: 5,28,847
ರಷ್ಯಾ: 3,88,610
ಮೆಕ್ಸಿಕೋ: 3,30,250
ಪೆರು: 2,16,830
ಯುಕೆ: 1,90,888
ಇಟಲಿ: 1,77,719
ಇಂಡೋನೇಷಿಯಾ: 1,58,263
ಫ್ರಾನ್ಸ್: 1,55,675

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 9,59,24,535
ಭಾರತ: 4,40,65,963
ಫ್ರಾನ್ಸ್: 3,48,94,458
ಬ್ರೆಜಿಲ್: 3,39,37,059
ಜರ್ಮನಿ: 3,28,09,700
ಯುಕೆ: 2,34,03,656
ಇಟಲಿ: 2,22,33,326
ರಷ್ಯಾ: 2,05,31,754
ಜಪಾನ್: 2,04,39,217
ಸ್ಪೇನ್: 1,32,42,579
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications