ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographics: ಆಗಸ್ಟ್ 1ರಂದು ಜಗತ್ತಿನಲ್ಲಿ ಕೊರೊನಾ ವೈರಸ್ ಅಂಕಿ-ಅಂಶ

|
Google Oneindia Kannada News

ನವದೆಹಲಿ, ಆಗಸ್ಟ್ 01: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಾವಳಿ ಮತ್ತೆ ಹೆಚ್ಚಾಗುತ್ತಿದೆ. ಇದರ ಮಧ್ಯೆ ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳು ಹೀಗಿವೆ.

ವಿಶ್ವದೆಲ್ಲೆಡೆ ಒಟ್ಟು 582,412,502ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,420,049 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 552,729,540 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಜಾಗತಿಕ ಅಂಕಿ-ಅಂಶಗಳು ತಿಳಿಸಿವೆ.

Breaking: ಭಾರತದಲ್ಲಿ ಒಂದೇ ದಿನ 20409 ಮಂದಿಗೆ ಕೊರೊನಾ ವೈರಸ್!Breaking: ಭಾರತದಲ್ಲಿ ಒಂದೇ ದಿನ 20409 ಮಂದಿಗೆ ಕೊರೊನಾ ವೈರಸ್!

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು 16 ಸಾವಿರದ ಗಡಿ ಇಳಿದಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾ ವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಆಗಸ್ಟ್ 01ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 16464 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 16464 ಮಂದಿಗೆ ಕೊವಿಡ್

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 16464 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ. ಇದೇ ಅವಧಿಯಲ್ಲಿ 39 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 16,112 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 44,036,275ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ, ಇದುವರೆಗೂ 43,365,890 ಸೋಂಕಿತರು ಗುಣಮುಖರಾಗಿದ್ದು, 526,396 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 143,989ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾ ವೈರಸ್ ಪರೀಕ್ಷೆ:

ಕೊವಿಡ್-19 ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿತು ಎನ್ನುವಷ್ಟರಲ್ಲೇ ಪಾಸಿಟಿವಿಟಿ ದರದಲ್ಲೂ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 3,96,424 ಮಂದಿಗೆ ಕೋವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ. ದೇಶದಲ್ಲಿ ಇದುವರೆಗೂ 87,52,07,621 ಜನರಿಗೆ ಕೊರೊನಾ ವೈರಸ್ ಸೋಂಕಿತ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 582,412,502 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,420,049 ಮಂದಿ ಪ್ರಾಣ ಬಿಟ್ಟಿದ್ದಾರೆ. 552,729,540 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 23,262,913 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 9,30,82,195

ಭಾರತ: 4,40,36,275

ಬ್ರೆಜಿಲ್: 3,38,59,575

ಫ್ರಾನ್ಸ್: 3,38,33,900

ಜರ್ಮನಿ: 3,08,53,312

ಯುಕೆ: 2,33,04,479

ಇಟಲಿ: 2,10,40,025

ದಕ್ಷಿಣ ಕೊರಿಯಾ: 1,98,20,739

ರಷ್ಯಾ: 1,86,12,543

ಟರ್ಕಿ: 1,58,89,495

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,55,059

ಬ್ರೆಜಿಲ್: 6,78,578

ಭಾರತ: 5,26,396

ರಷ್ಯಾ: 3,82,469

ಮೆಕ್ಸಿಕೋ: 3,27,730

ಪೆರು: 2,14,303

ಯುಕೆ: 1,83,953

ಇಟಲಿ: 1,72,086

ಇಂಡೋನೇಷಿಯಾ: 1,57,004

ಫ್ರಾನ್ಸ್: 1,51,983

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 8,82,15,008

ಭಾರತ: 4,33,65,890

ಬ್ರೆಜಿಲ್: 3,23,54,263

ಫ್ರಾನ್ಸ್: 3,22,14,958

ಜರ್ಮನಿ: 2,90,05,100

ಯುಕೆ: 2,26,96,786

ಇಟಲಿ: 1,95,91,456

ರಷ್ಯಾ: 1,79,81,475

ಟರ್ಕಿ: 1,54,87,468

ಸ್ಪೇನ್: 1,26,10,266

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
Covid 19 Info: The world is seeing a surge in the number of coronavirus cases. As on August 1st the total cases are at 582,412,502 with death is 6,420,049. The total number of recoveries is 552,729,540.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X