ಫೆ.1: ವಿಶ್ವದ ಯಾವ ರಾಷ್ಟ್ರದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?

ಬೆಂಗಳೂರು, ಫೆಬ್ರವರಿ 1: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರ ಮಧ್ಯೆ ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 379,580,519ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 5,693,971 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 299,463,353 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಒಂದೇ ದಿನ 2.74 ಲಕ್ಷಕ್ಕೂ ಅಧಿಕ ಸೋಂಕಿತ ಪ್ರಕರಣ ದಾಖಲಾಗಿವೆ.

ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಶುರುವಾಗಿದೆ. ದೇಶದಲ್ಲಿ ಈಗಾಗಲೇ ದೈನಂದಿನ ಸೋಂಕಿತ ಪ್ರಕರಣಗಳ ಸಂಖ್ಯೆ 2 ಲಕ್ಷಕ್ಕಿಂತ ಕಡಿಮೆಯಾಗಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಫೆಬ್ರವರಿ 1ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 2 ಲಕ್ಷಕ್ಕೂ ಕಡಿಮೆ ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 2 ಲಕ್ಷಕ್ಕೂ ಕಡಿಮೆ ಮಂದಿಗೆ ಕೊವಿಡ್

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ನಡುವೆ ಭಾರತದಲ್ಲಿ ಒಂದೇ ದಿನ 2 ಲಕ್ಷಕ್ಕಿಂತ ಕಡಿಮೆ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 167,059 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1,218 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 254,076 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 41,469,499ಕ್ಕೆ ಏರಿಕೆಯಾಗಿದೆ. ಈ ಪೈಕಿ 39,230,198 ಸೋಂಕಿತರು ಗುಣಮುಖರಾಗಿದ್ದರೆ, 496,268 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 1,743,033 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 379,580,519 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 5,693,971 ಮಂದಿ ಪ್ರಾಣ ಬಿಟ್ಟಿದ್ದಾರೆ. 299,463,353 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 74,423,195 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 7,62,22,215

ಭಾರತ: 4,14,69,499

ಬ್ರೆಜಿಲ್: 2,54,54,105

ಫ್ರಾನ್ಸ್: 1,91,40,730

ಯುಕೆ: 1,73,15,893

ರಷ್ಯಾ: 1,19,86,913

ಟರ್ಕಿ: 1,16,19,882

ಇಟಲಿ: 1,09,83,116

ಸ್ಪೇನ್: 99,61,253

ಜರ್ಮನಿ: 98,96,344

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 9,10,104

ಬ್ರೆಜಿಲ್: 6,27,365

ಭಾರತ: 4,96,268

ರಷ್ಯಾ: 3,32,012

ಮೆಕ್ಸಿಕೋ: 3,06,091

ಪೆರು: 2,05,834

ಯುಕೆ: 1,55,754

ಇಂಡೋನೇಷಿಯಾ: 1,44,320

ಇಟಲಿ: 1,46,498

ಇರಾನ್: 1,32,454

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 4,62,42,222

ಭಾರತ: 3,92,30,198

ಬ್ರೆಜಿಲ್: 2,21,96,442

ಯುಕೆ: 1,34,84,929

ಫ್ರಾನ್ಸ್: 1,24,42,332

ಟರ್ಕಿ: 1,09,11,159

ರಷ್ಯಾ: 1,02,88,582

ಜರ್ಮನಿ: 77,05,000

ಅರ್ಜೆಂಟೀನಾ: 76,06,670

ಇರಾನ್: 61,06,442

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+