ಫೆ.12: ವಿಶ್ವದ ಯಾವ ರಾಷ್ಟ್ರದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?
ಬೆಂಗಳೂರು, ಫೆಬ್ರವರಿ 12: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರ ಮಧ್ಯೆ ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 409,297,519ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 5,822,224 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 329,591,711 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಒಂದೇ ದಿನ 1.49 ಲಕ್ಷಕ್ಕೂ ಅಧಿಕ ಸೋಂಕಿತ ಪ್ರಕರಣ ದಾಖಲಾಗಿವೆ.
ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಶುರುವಾಗಿದೆ. ದೇಶದಲ್ಲಿ ಈಗಾಗಲೇ ದೈನಂದಿನ ಸೋಂಕಿತ ಪ್ರಕರಣಗಳ ಸಂಖ್ಯೆ 50 ಸಾವಿರಕ್ಕೂ ಹೆಚ್ಚಾಗಿವೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಫೆಬ್ರವರಿ 12ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 50 ಸಾವಿರಕ್ಕೂ ಕಡಿಮೆ ಮಂದಿಗೆ ಕೊವಿಡ್
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ನಡುವೆ ಭಾರತದಲ್ಲಿ ಒಂದೇ ದಿನ 50 ಸಾವಿರಕ್ಕೂ ಕಡಿಮೆ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 50,407 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 804 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 136,962 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 42,586,544ಕ್ಕೆ ಏರಿಕೆಯಾಗಿದೆ. ಈ ಪೈಕಿ 41,468,120 ಸೋಂಕಿತರು ಗುಣಮುಖರಾಗಿದ್ದರೆ, 508,012 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 610,412 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 409,297,519 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 5,822,224 ಮಂದಿ ಪ್ರಾಣ ಬಿಟ್ಟಿದ್ದಾರೆ. 329,591,711 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 73,883,584 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 7,92,28,628
ಭಾರತ: 4,25,86,544
ಬ್ರೆಜಿಲ್: 2,72,91,515
ಫ್ರಾನ್ಸ್: 2,15,03,654
ಯುಕೆ: 1,82,20,515
ರಷ್ಯಾ: 1,39,35,560
ಟರ್ಕಿ: 1,27,48,341
ಜರ್ಮನಿ: 1,21,26,991
ಇಟಲಿ: 1,19,91,109
ಸ್ಪೇನ್: 1,06,04,200

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 9,42,006
ಬ್ರೆಜಿಲ್: 6,37,232
ಭಾರತ: 5,08,012
ರಷ್ಯಾ: 3,39,4542
ಮೆಕ್ಸಿಕೋ: 3,12,118
ಪೆರು: 2,07,965
ಯುಕೆ: 1,59,351
ಇಂಡೋನೇಷಿಯಾ: 1,44,958
ಇಟಲಿ: 1,50,555
ಇರಾನ್: 1,33,437

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 4,96,26,604
ಭಾರತ: 4,14,68,120
ಬ್ರೆಜಿಲ್: 2,35,68,213
ಫ್ರಾನ್ಸ್: 2,62,56,282
ಯುಕೆ: 1,58,43,223
ಟರ್ಕಿ: 1,18,41,675
ರಷ್ಯಾ: 1,11,34,291
ಜರ್ಮನಿ: 86,79,400
ಅರ್ಜೆಂಟೀನಾ: 83,67,347
ಇರಾನ್: 62,60,240
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications