ಫೆ.14: ವಿಶ್ವದ ಯಾವ ರಾಷ್ಟ್ರದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?
ಬೆಂಗಳೂರು, ಫೆಬ್ರವರಿ 14: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರ ಮಧ್ಯೆ ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 412,956,290ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 5,837,065 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 333,530,200 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 31,652 ಪ್ರಕರಣಗಳು ವರದಿಯಾಗಿವೆ.
ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಶುರುವಾಗಿದೆ. ದೇಶದಲ್ಲಿ ಈಗಾಗಲೇ ದೈನಂದಿನ ಸೋಂಕಿತ ಪ್ರಕರಣಗಳ ಸಂಖ್ಯೆ 34 ಸಾವಿರಕ್ಕೂ ಹೆಚ್ಚಾಗಿವೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಫೆಬ್ರವರಿ 14ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 34 ಸಾವಿರಕ್ಕೂ ಕಡಿಮೆ ಮಂದಿಗೆ ಕೊವಿಡ್
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ತಗ್ಗಿದೆ. ಭಾರತದಲ್ಲಿ ಒಂದು ದಿನದಲ್ಲಿ 34 ಸಾವಿರ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 34,113 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 378 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 91,930 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 42,665,534ಕ್ಕೆ ಏರಿಕೆಯಾಗಿದೆ. ಈ ಪೈಕಿ 41,677,641 ಸೋಂಕಿತರು ಗುಣಮುಖರಾಗಿದ್ದರೆ, 509,043 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 478,850 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 412,956,290 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 5,837,065 ಮಂದಿ ಪ್ರಾಣ ಬಿಟ್ಟಿದ್ದಾರೆ. 333,530,200 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 73,589,025 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 7,93,25,576
ಭಾರತ: 4,26,65,534
ಬ್ರೆಜಿಲ್: 2,74,83,031
ಫ್ರಾನ್ಸ್: 2,17,08,827
ಯುಕೆ: 1,83,06,859
ರಷ್ಯಾ: 1,43,13,965
ಟರ್ಕಿ: 1,29,08,321
ಜರ್ಮನಿ: 1,23,87,078
ಇಟಲಿ: 1,21,05,675
ಸ್ಪೇನ್: 1,06,04,200

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 9,43,411
ಬ್ರೆಜಿಲ್: 6,38,449
ಭಾರತ: 5,09,043
ರಷ್ಯಾ: 3,40,931
ಮೆಕ್ಸಿಕೋ: 3,12,819
ಪೆರು: 2,08,381
ಯುಕೆ: 1,59,570
ಇಂಡೋನೇಷಿಯಾ: 1,45,176
ಇಟಲಿ: 1,51,015
ಇರಾನ್: 1,33,718

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 4,98,36,893
ಭಾರತ: 4,16,77, 641
ಬ್ರೆಜಿಲ್: 2,37,83,443
ಫ್ರಾನ್ಸ್: 2,66,66,109
ಯುಕೆ: 1,60,29,725
ಟರ್ಕಿ: 1,19,85,370
ರಷ್ಯಾ: 1,13,33,044
ಜರ್ಮನಿ: 88,38,800
ಅರ್ಜೆಂಟೀನಾ: 84,31,883
ಇರಾನ್: 62,98,727
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications