ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫೆ.15: ಜಗತ್ತಿನ ಯಾವ ರಾಷ್ಟ್ರದಲ್ಲಿ ಎಷ್ಟು ಕೊರೊನಾವೈರಸ್ ಸೋಂಕಿತರು ಗುಣಮುಖ?

|
Google Oneindia Kannada News

ಬೆಂಗಳೂರು, ಫೆಬ್ರವರಿ 15: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ದಿನದಿಂದ ದಿನಕ್ಕೆ ನಿಯಂತ್ರಣಕ್ಕೆ ಬರುತ್ತಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 414,526,439ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 5,847,611 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 336,606,907 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 80,842 ಪ್ರಕರಣಗಳು ವರದಿಯಾಗಿವೆ.

ಕೊರೊನಾ ಕಥೆ ಹೀಗಾದ್ರೆ, ಎಬೋಲಾಗೆ ವೈದ್ಯರ ಚಿಕಿತ್ಸೆ ಹೇಗಿತ್ತು?ಕೊರೊನಾ ಕಥೆ ಹೀಗಾದ್ರೆ, ಎಬೋಲಾಗೆ ವೈದ್ಯರ ಚಿಕಿತ್ಸೆ ಹೇಗಿತ್ತು?

ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಶುರುವಾಗಿದೆ. ದೇಶದಲ್ಲಿ ಈಗಾಗಲೇ ದೈನಂದಿನ ಸೋಂಕಿತ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಫೆಬ್ರವರಿ 15ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 27 ಸಾವಿರ ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 27 ಸಾವಿರ ಮಂದಿಗೆ ಕೊವಿಡ್

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ತಗ್ಗಿದೆ. ಭಾರತದಲ್ಲಿ ಒಂದು ದಿನದಲ್ಲಿ 34 ಸಾವಿರ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 27,409 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 345 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 82,817 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 42,692,943ಕ್ಕೆ ಏರಿಕೆಯಾಗಿದೆ. ಈ ಪೈಕಿ 41,760,458 ಸೋಂಕಿತರು ಗುಣಮುಖರಾಗಿದ್ದರೆ, 509,388 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 423,097 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 414,526,439 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 5,847,611 ಮಂದಿ ಪ್ರಾಣ ಬಿಟ್ಟಿದ್ದಾರೆ. 336,606,907 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 72,071,921 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊರೊನಾಗಿಂತಲೂ ಮೊದಲು ವೈದ್ಯಕೀಯ ಲೋಕಕ್ಕೆ ಎಬೋಲಾ ಸವಾಲುಕೊರೊನಾಗಿಂತಲೂ ಮೊದಲು ವೈದ್ಯಕೀಯ ಲೋಕಕ್ಕೆ ಎಬೋಲಾ ಸವಾಲು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 7,95,20,665

ಭಾರತ: 4,26,92,943

ಬ್ರೆಜಿಲ್: 2,75,41,131

ಫ್ರಾನ್ಸ್: 2,17,35,302

ಯುಕೆ: 1,83,48,029

ರಷ್ಯಾ: 1,44,80,596

ಟರ್ಕಿ: 1,29,84,953

ಜರ್ಮನಿ: 1,25,14,527

ಇಟಲಿ: 1,21,34,451

ಸ್ಪೇನ್: 1,06,72,906

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 9,46,180

ಬ್ರೆಜಿಲ್: 6,38,913

ಭಾರತ: 5,09,388

ರಷ್ಯಾ: 3,41,635

ಮೆಕ್ಸಿಕೋ: 3,12,965

ಪೆರು: 2,08,466

ಯುಕೆ: 1,59,605

ಇಂಡೋನೇಷಿಯಾ: 1,45,321

ಇಟಲಿ: 1,51,296

ಇರಾನ್: 1,33,886

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 5,02,08,417

ಭಾರತ: 4,17,60,458

ಬ್ರೆಜಿಲ್: 2,39,69,577

ಫ್ರಾನ್ಸ್: 2,71,67,359

ಯುಕೆ: 1,61,42,529

ಟರ್ಕಿ: 1,20,60,306

ರಷ್ಯಾ: 1,14,70,925

ಜರ್ಮನಿ: 89,89,100

ಅರ್ಜೆಂಟೀನಾ: 84,61,793

ಇರಾನ್: 63,27,200

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
Covid 19 Info: The world is seeing a surge in the number of coronavirus cases. As on February 15 the total cases are at 414,526,439 with death is 5,847,611. The total number of recoveries is 336,606,907.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X