ಫೆ.2: ಜಗತ್ತಿನ ಯಾವ ರಾಷ್ಟ್ರದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?
ಬೆಂಗಳೂರು, ಫೆಬ್ರವರಿ 2: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರ ಮಧ್ಯೆ ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 382,709,507ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 5,708,038 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 303,355,658 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಒಂದೇ ದಿನ 2.64 ಲಕ್ಷಕ್ಕೂ ಅಧಿಕ ಸೋಂಕಿತ ಪ್ರಕರಣ ದಾಖಲಾಗಿವೆ.
ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಶುರುವಾಗಿದೆ. ದೇಶದಲ್ಲಿ ಈಗಾಗಲೇ ದೈನಂದಿನ ಸೋಂಕಿತ ಪ್ರಕರಣಗಳ ಸಂಖ್ಯೆ 1.65 ಲಕ್ಷಕ್ಕಿಂತ ಕಡಿಮೆಯಾಗಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಫೆಬ್ರವರಿ 2ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 2 ಲಕ್ಷಕ್ಕೂ ಕಡಿಮೆ ಮಂದಿಗೆ ಕೊವಿಡ್
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ನಡುವೆ ಭಾರತದಲ್ಲಿ ಒಂದೇ ದಿನ 1.65 ಲಕ್ಷಕ್ಕಿಂತ ಕಡಿಮೆ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 161,386 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1,728 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 281,109 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 41,630,885ಕ್ಕೆ ಏರಿಕೆಯಾಗಿದೆ. ಈ ಪೈಕಿ 39,511,307 ಸೋಂಕಿತರು ಗುಣಮುಖರಾಗಿದ್ದರೆ, 497,996 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 1,621,582 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 382,709,507 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 5,708,038 ಮಂದಿ ಪ್ರಾಣ ಬಿಟ್ಟಿದ್ದಾರೆ. 303,355,658 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 73,645,811 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 7,65,16,202
ಭಾರತ: 4,16,30,885
ಬ್ರೆಜಿಲ್: 2,56,25,133
ಫ್ರಾನ್ಸ್: 1,95,57,626
ಯುಕೆ: 1,74,28,345
ರಷ್ಯಾ: 1,19,86,913
ಟರ್ಕಿ: 1,17,22,843
ಇಟಲಿ: 1,11,16,422
ಜರ್ಮನಿ: 1,00,79,778
ಸ್ಪೇನ್: 1,00,39,126

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 9,13,924
ಬ್ರೆಜಿಲ್: 6,28,132
ಭಾರತ: 4,97,996
ರಷ್ಯಾ: 3,32,012
ಮೆಕ್ಸಿಕೋ: 3,06,920
ಪೆರು: 2,05,834
ಯುಕೆ: 1,55,973
ಇಂಡೋನೇಷಿಯಾ: 1,44,348
ಇಟಲಿ: 1,46,925
ಇರಾನ್: 1,32,504

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 4,66,47,029
ಭಾರತ: 3,95,11,307
ಬ್ರೆಜಿಲ್: 2,23,53,361
ಯುಕೆ: 1,34,84,929
ಫ್ರಾನ್ಸ್: 1,28,03,670
ಟರ್ಕಿ: 1,09,98,721
ರಷ್ಯಾ: 1,02,88,582
ಜರ್ಮನಿ: 77,05,000
ಅರ್ಜೆಂಟೀನಾ: 77,93,699
ಇರಾನ್: 61,10,615
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications