ಫೆ.26: ಜಗತ್ತಿನ ಯಾವ ದೇಶದಲ್ಲಿ ಎಷ್ಟು ಕೊರೊನಾವೈರಸ್ ಸೋಂಕಿತರು ಗುಣಮುಖ?
ಬೆಂಗಳೂರು, ಫೆಬ್ರವರಿ 26: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ದಿನದಿಂದ ದಿನಕ್ಕೆ ನಿಯಂತ್ರಣಕ್ಕೆ ಬರುತ್ತಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 433,908,197ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 5,959,362 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 363,695,182 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 76 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿವೆ.
ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಶುರುವಾಗಿದೆ. ದೇಶದಲ್ಲಿ ಈಗಾಗಲೇ ದೈನಂದಿನ ಸೋಂಕಿತ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಫೆಬ್ರವರಿ 26ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 22 ಸಾವಿರ ಮಂದಿಗೆ ಕೊವಿಡ್
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ತಗ್ಗಿದೆ. ಭಾರತದಲ್ಲಿ ಒಂದು ದಿನದಲ್ಲಿ 11 ಸಾವಿರ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 11,499 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 254 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 23,598 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 42,905,844ಕ್ಕೆ ಏರಿಕೆಯಾಗಿದೆ. ಈ ಪೈಕಿ 42,270,482 ಸೋಂಕಿತರು ಗುಣಮುಖರಾಗಿದ್ದರೆ, 513,512 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 121,850 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 433,908,197 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 5,959,362 ಮಂದಿ ಪ್ರಾಣ ಬಿಟ್ಟಿದ್ದಾರೆ. 363,695,182 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 64,253,653 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 8,05,32,307
ಭಾರತ: 4,29,05,844
ಬ್ರೆಜಿಲ್: 2,86,71,194
ಫ್ರಾನ್ಸ್: 2,25,93,109
ಯುಕೆ: 1,88,04,765
ರಷ್ಯಾ: 1,60,52,028
ಜರ್ಮನಿ: 1,45,04,151
ಟರ್ಕಿ: 1,39,13,625
ಇಟಲಿ: 1,26,93,320
ಸ್ಪೇನ್: 1,09,77,524

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 9,72,200
ಬ್ರೆಜಿಲ್: 6,48,267
ಭಾರತ: 5,13,512
ರಷ್ಯಾ: 3,49,365
ಮೆಕ್ಸಿಕೋ: 3,17,683
ಪೆರು: 2,10,229
ಯುಕೆ: 1,61,224
ಇಟಲಿ: 1,54,206
ಇಂಡೋನೇಷಿಯಾ: 1,47,586
ಇರಾನ್: 1,37,958

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 5,28,66,250
ಭಾರತ: 4,22,70,482
ಬ್ರೆಜಿಲ್: 2,59,94,566
ಫ್ರಾನ್ಸ್: 2,04,64,974
ಯುಕೆ: 1,71,53,253
ಟರ್ಕಿ: 1,31,33,955
ರಷ್ಯಾ: 1,31,39,971
ಜರ್ಮನಿ: 1,07,58,500
ಅರ್ಜೆಂಟೀನಾ: 86,44,638
ಇರಾನ್: 66,02,417
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications