ಫೆ.4: ವಿಶ್ವದ ಯಾವ ರಾಷ್ಟ್ರದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?
ಬೆಂಗಳೂರು, ಫೆಬ್ರವರಿ 4: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರ ಮಧ್ಯೆ ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 388,980,985ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 5,733,114 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 308,274,298 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಒಂದೇ ದಿನ 2.50 ಲಕ್ಷಕ್ಕೂ ಅಧಿಕ ಸೋಂಕಿತ ಪ್ರಕರಣ ದಾಖಲಾಗಿವೆ.
ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಶುರುವಾಗಿದೆ. ದೇಶದಲ್ಲಿ ಈಗಾಗಲೇ ದೈನಂದಿನ ಸೋಂಕಿತ ಪ್ರಕರಣಗಳ ಸಂಖ್ಯೆ 1.49 ಲಕ್ಷಕ್ಕಿಂತ ಹೆಚ್ಚಾಗಿವೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಫೆಬ್ರವರಿ 4ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 2 ಲಕ್ಷಕ್ಕೂ ಕಡಿಮೆ ಮಂದಿಗೆ ಕೊವಿಡ್
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ನಡುವೆ ಭಾರತದಲ್ಲಿ ಒಂದೇ ದಿನ 1.50 ಲಕ್ಷಕ್ಕಿಂತ ಕಡಿಮೆ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 149,394 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1,100 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 246,674 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 41,952,712ಕ್ಕೆ ಏರಿಕೆಯಾಗಿದೆ. ಈ ಪೈಕಿ 40,017,088 ಸೋಂಕಿತರು ಗುಣಮುಖರಾಗಿದ್ದರೆ, 500,087 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 1,435,537 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 388,980,985 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 5,733,114 ಮಂದಿ ಪ್ರಾಣ ಬಿಟ್ಟಿದ್ದಾರೆ. 308,274,298 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 74,973,573 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 7,71,50,412
ಭಾರತ: 4,19,52,712
ಬ್ರೆಜಿಲ್: 2,60,99,735
ಫ್ರಾನ್ಸ್: 2,01,471,341
ಯುಕೆ: 1,76,07,832
ರಷ್ಯಾ: 1,24,52,765
ಟರ್ಕಿ: 1,19,40,695
ಇಟಲಿ: 1,13,48,701
ಜರ್ಮನಿ: 1,05,43,318
ಸ್ಪೇನ್: 1,01,99,716

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 9,20,829
ಬ್ರೆಜಿಲ್: 6,30,001
ಭಾರತ: 5,00,087
ರಷ್ಯಾ: 3,34,039
ಮೆಕ್ಸಿಕೋ: 3,08,141
ಪೆರು: 2,06,406
ಯುಕೆ: 1,57,730
ಇಂಡೋನೇಷಿಯಾ: 1,44,411
ಇಟಲಿ: 1,47,734
ಇರಾನ್: 1,32,624

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 4,73,13,736
ಭಾರತ: 3,00,17,088
ಬ್ರೆಜಿಲ್: 2,26,02,506
ಯುಕೆ: 1,48,31,441
ಫ್ರಾನ್ಸ್: 1,34,37,823
ಟರ್ಕಿ: 1,11,73,406
ರಷ್ಯಾ: 1,04,49,181
ಜರ್ಮನಿ: 79,53,200
ಅರ್ಜೆಂಟೀನಾ: 79,44,013
ಇರಾನ್: 61,21,353
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications