ಜ.3: ಜಾಗತಿಕವಾಗಿ ಕೊವಿಡ್19 ಸೋಂಕು ಬಾಧಿತ ಟಾಪ್-10 ರಾಷ್ಟ್ರಗಳ ಪಟ್ಟಿ
ಬೆಂಗಳೂರು, ಜನವರಿ 03: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಗೆ ವೇಗ ಹೆಚ್ಚಾಗುತ್ತಿದೆ. ಇದರ ಮಧ್ಯೆ ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 290,851,926 ಗೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 5,462,340 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 254,718,225 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಒಂದೇ ದಿನ 1.85 ಲಕ್ಷ ಸೋಂಕಿತ ಪ್ರಕರಣ ದಾಖಲಾಗಿದ್ದು, ಆತಂಕ ಮೂಡಿಸಿದೆ.
ಭಾರತದಲ್ಲಿ 2022ರ ಜನವರಿ 10ರಿಂದ ವೈದ್ಯಕೀಯ ಸಿಬ್ಬಂದಿ ಹಾಗೂ ಮೊದಲ ಶ್ರೇಣಿ ಕಾರ್ಮಿಕರಿಗೆ ಬೂಸ್ಟರ್ ಡೋಸ್ ನೀಡಲಾಗುವುದು. ಕೊರೊನಾವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕು ಹರಡುವಿಕೆ ಭೀತಿ ನಡುವೆ ಭಾರತದಲ್ಲಿ 15 ವರ್ಷದಿಂದ 18 ವರ್ಷದ ಮಕ್ಕಳಿಗೂ ಕೊರೊನಾವೈರಸ್ ಲಸಿಕೆ ವಿತರಣೆಯನ್ನು ಸೋಮವಾರದಿಂದ ಆರಂಭಿಸಲಾಗಿದೆ.
ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜನವರಿ 03ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 13,000ಕ್ಕೂ ಹೆಚ್ಚು ಮಂದಿಗೆ ಕೊವಿಡ್-19
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ನಡುವೆ ಭಾರತದಲ್ಲಿ ಒಂದೇ ದಿನ 13,000ಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 33,750 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 123 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 10,846 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಈವರೆಗೂ 3,42,95,407 ಸೋಂಕಿತರು ಗುಣಮುಖರಾಗಿದ್ದರೆ, 4,81,893 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 1,45,582 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 1,700 ಹೊಸ ರೂಪಾಂತರಿ ಓಮಿಕ್ರಾನ್ ಸೋಂಕಿತ ಪ್ರಕರಣಗಳಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಜಾಗತಿಕ ಮಟ್ಟದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳನ್ನು ಬೆನ್ನು ಬಿಡದ ಭೂತದಂತೆ ಕಾಡುತ್ತಿದೆ. ಜಗತ್ತಿನಲ್ಲಿ ಈವರೆಗೂ 290,859,963 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 5,462,397 ಮಂದಿ ಪ್ರಾಣ ಬಿಟ್ಟಿದ್ದಾರೆ. 254,721,565 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 30,676,001 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 5,61,42,175
ಭಾರತ: 3,49,22,882
ಬ್ರೆಜಿಲ್: 2,22,93,228
ಯುಕೆ: 1,32,35,401
ರಷ್ಯಾ: 1,05,54,309
ಫ್ರಾನ್ಸ್: 1,02,50,358
ಟರ್ಕಿ: 95,52,801
ಜರ್ಮನಿ: 72,08,790
ಇಟಲಿ: 63,28,076

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 8,47,408
ಬ್ರೆಜಿಲ್: 619,171
ಭಾರತ: 4,81,839
ರಷ್ಯಾ: 3,11,353
ಮೆಕ್ಸಿಕೋ: 2,99,544
ಪೆರು: 2,02,741
ಯುಕೆ: 1,48,851
ಇಂಡೋನೇಷಿಯಾ: 1,44,097
ಇರಾನ್: 1,31,680
ಫ್ರಾನ್ಸ್: 123,942

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 4,15,43,060
ಭಾರತ: 3,42,95,407
ಬ್ರೆಜಿಲ್: 2,15, 67,845
ಯುಕೆ: 1,04,10,273
ರಷ್ಯಾ: 95,48,076
ಟರ್ಕಿ: 91,08,798
ಫ್ರಾನ್ಸ್: 81,46,786
ಜರ್ಮನಿ: 64,78,600
ಇರಾನ್: 60,40,897
ಅರ್ಜೆಂಟೀನಾ: 53,36,023
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications