ಜ.4: ಜಗತ್ತಿನ ಯಾವ ರಾಷ್ಟ್ರದಲ್ಲಿ ಎಷ್ಟು ಮಂದಿ ಕೊರೊನಾದಿಂದ ಸಾವು?
ಬೆಂಗಳೂರು, ಜನವರಿ 04: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ವೇಗ ಹೆಚ್ಚಾಗುತ್ತಿದೆ. ಇದರ ಮಧ್ಯೆ ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 293,086,939 ಗೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 5,467,834 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 255,484,456 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಒಂದೇ ದಿನ 4.26 ಲಕ್ಷ ಸೋಂಕಿತ ಪ್ರಕರಣ ದಾಖಲಾಗಿದ್ದು, ಆತಂಕ ಮೂಡಿಸಿದೆ.
ಭಾರತದಲ್ಲಿ 2022ರ ಜನವರಿ 10ರಿಂದ ವೈದ್ಯಕೀಯ ಸಿಬ್ಬಂದಿ ಹಾಗೂ ಮೊದಲ ಶ್ರೇಣಿ ಕಾರ್ಮಿಕರಿಗೆ ಬೂಸ್ಟರ್ ಡೋಸ್ ನೀಡಲಾಗುವುದು. ಕೊರೊನಾವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕು ಹರಡುವಿಕೆ ಭೀತಿ ನಡುವೆ ಭಾರತದಲ್ಲಿ 15 ವರ್ಷದಿಂದ 18 ವರ್ಷದ ಮಕ್ಕಳಿಗೂ ಕೊರೊನಾವೈರಸ್ ಲಸಿಕೆ ವಿತರಣೆಯನ್ನು ಈಗಾಗಲೇ ಆರಂಭಿಸಲಾಗಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜನವರಿ 04ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 37,000ಕ್ಕೂ ಹೆಚ್ಚು ಮಂದಿಗೆ ಕೊವಿಡ್-19
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ನಡುವೆ ಭಾರತದಲ್ಲಿ ಒಂದೇ ದಿನ 37,000ಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 37,379 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 124 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 11,007 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಈವರೆಗೂ 3,43,06,414 ಸೋಂಕಿತರು ಗುಣಮುಖರಾಗಿದ್ದರೆ, 4,82,017 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 1,71,830 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 293,086,939 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 5,467,834 ಮಂದಿ ಪ್ರಾಣ ಬಿಟ್ಟಿದ್ದಾರೆ. 255,484,456 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 32,134,649 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 5,71,31,187
ಭಾರತ: 3,49,60,261
ಬ್ರೆಜಿಲ್: 2,23,05,078
ಯುಕೆ: 1,34,22,815
ರಷ್ಯಾ: 1,05,70,212
ಫ್ರಾನ್ಸ್: 1,03,17,819
ಟರ್ಕಿ: 95,97,670
ಜರ್ಮನಿ: 72,35,135
ಸ್ಪೇನ್: 66,67,511
ಇಟಲಿ: 63,96,110

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 8,48,885
ಬ್ರೆಜಿಲ್: 619,245
ಭಾರತ: 4,82,017
ರಷ್ಯಾ: 3,12,187
ಮೆಕ್ಸಿಕೋ: 2,99,581
ಪೆರು: 2,02,818
ಯುಕೆ: 1,48,893
ಇಂಡೋನೇಷಿಯಾ: 1,44,102
ಇರಾನ್: 1,31,702
ಫ್ರಾನ್ಸ್: 1,24,212

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 4,17,22,468
ಭಾರತ: 3,43,06,414
ಬ್ರೆಜಿಲ್: 2,15, 67,845
ಯುಕೆ: 1,04,60,659
ರಷ್ಯಾ: 95,75,147
ಟರ್ಕಿ: 91,36,290
ಫ್ರಾನ್ಸ್: 82,09,921
ಜರ್ಮನಿ: 65,31,900
ಇರಾನ್: 60,42,589
ಅರ್ಜೆಂಟೀನಾ: 53,54,411
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications