ಜ.6: ಜಗತ್ತಿನ ಯಾವ ರಾಷ್ಟ್ರದಲ್ಲಿ ಎಷ್ಟು ಕೊರೊನಾ ರೋಗಿಗಳು ಗುಣಮುಖ?
ಬೆಂಗಳೂರು, ಜನವರಿ 06: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ವೇಗ ಹೆಚ್ಚಾಗುತ್ತಿದೆ. ಇದರ ಮಧ್ಯೆ ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 299,033,643ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 5,485,333 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 257,127,140 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಒಂದೇ ದಿನ 7 ಲಕ್ಷಕ್ಕೂ ಅಧಿಕ ಸೋಂಕಿತ ಪ್ರಕರಣ ದಾಖಲಾಗಿದ್ದು, ಆತಂಕ ಮೂಡಿಸಿದೆ.
ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಶುರುವಾಗಿದೆ. ದೇಶದಲ್ಲಿ ಈಗಾಗಲೇ ದೈನಂದಿನ ಸೋಂಕಿತ ಪ್ರಕರಣಗಳ ಸಂಖ್ಯೆ 90,000 ಗಡಿ ದಾಟಿದೆ. ಇದರ ಮಧ್ಯೆ 2022ರ ಜನವರಿ 10ರಿಂದ ವೈದ್ಯಕೀಯ ಸಿಬ್ಬಂದಿ ಹಾಗೂ ಮೊದಲ ಶ್ರೇಣಿ ಕಾರ್ಮಿಕರಿಗೆ ಬೂಸ್ಟರ್ ಡೋಸ್ ನೀಡಲಾಗುತ್ತಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜನವರಿ 06ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 90,000ಕ್ಕೂ ಹೆಚ್ಚು ಮಂದಿಗೆ ಕೊವಿಡ್
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ನಡುವೆ ಭಾರತದಲ್ಲಿ ಒಂದೇ ದಿನ 90,000ಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 90,928 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 325 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 19,206 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಈವರೆಗೂ 3,43,41,009 ಸೋಂಕಿತರು ಗುಣಮುಖರಾಗಿದ್ದರೆ, 4,82,876 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 2,85,401 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 299,033,643 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 5,485,333 ಮಂದಿ ಪ್ರಾಣ ಬಿಟ್ಟಿದ್ದಾರೆ. 257,127,140 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 36,421,170 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 5,88,05,186
ಭಾರತ: 3,51,09,286
ಬ್ರೆಜಿಲ್: 2,23,51,104
ಯುಕೆ: 1,38,35,334
ಫ್ರಾನ್ಸ್: 1,09,21,757
ರಷ್ಯಾ: 1,06,01,300
ಟರ್ಕಿ: 97,18,861
ಜರ್ಮನಿ: 73,42,216
ಸ್ಪೇನ್: 69,22,462
ಇಟಲಿ: 67,56,035

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 8,53,612
ಬ್ರೆಜಿಲ್: 6,19,559
ಭಾರತ: 4,82,876
ರಷ್ಯಾ: 3,13,817
ಮೆಕ್ಸಿಕೋ: 2,99,805
ಪೆರು: 2,02,904
ಯುಕೆ: 1,49,284
ಇಂಡೋನೇಷಿಯಾ: 1,44,116
ಇರಾನ್: 1,31,778
ಫ್ರಾನ್ಸ್: 1,24,809

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 4,19,99,896
ಭಾರತ: 3,43,42,255
ಬ್ರೆಜಿಲ್: 2,15, 67,845
ಯುಕೆ: 1,05,67,672
ರಷ್ಯಾ: 96,23,677
ಟರ್ಕಿ: 91,92,167
ಫ್ರಾನ್ಸ್: 83,35,903
ಜರ್ಮನಿ: 66,26,500
ಇರಾನ್: 60,45,890
ಅರ್ಜೆಂಟೀನಾ: 53,90,524
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)
Recommended Video
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications