ಜ.8: ಜಗತ್ತಿನ ಯಾವ ರಾಷ್ಟ್ರದಲ್ಲಿ ಎಷ್ಟು ಕೊರೊನಾ ರೋಗಿಗಳು ಗುಣಮುಖ?

ಬೆಂಗಳೂರು, ಜನವರಿ 08: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ವೇಗ ಹೆಚ್ಚಾಗುತ್ತಿದೆ. ಇದರ ಮಧ್ಯೆ ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 304,063,804ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 5,499,445 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 258,448,755 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಒಂದೇ ದಿನ 8.49 ಲಕ್ಷಕ್ಕೂ ಅಧಿಕ ಸೋಂಕಿತ ಪ್ರಕರಣ ದಾಖಲಾಗಿದ್ದು, ಆತಂಕ ಮೂಡಿಸಿದೆ.

ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಶುರುವಾಗಿದೆ. ದೇಶದಲ್ಲಿ ಈಗಾಗಲೇ ದೈನಂದಿನ ಸೋಂಕಿತ ಪ್ರಕರಣಗಳ ಸಂಖ್ಯೆ 1,41,000 ಗಡಿ ದಾಟಿದೆ. ಇದರ ಮಧ್ಯೆ 2022ರ ಜನವರಿ 10ರಿಂದ ವೈದ್ಯಕೀಯ ಸಿಬ್ಬಂದಿ ಹಾಗೂ ಮೊದಲ ಶ್ರೇಣಿ ಕಾರ್ಮಿಕರಿಗೆ ಬೂಸ್ಟರ್ ಡೋಸ್ ನೀಡಲಾಗುತ್ತಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜನವರಿ 08ರ ಪ್ರಕಾರ) ಇಲ್ಲಿದೆ.

Covid 19 Info: Countries With Number of Infected, Deaths, recovered Jan 08

ದೇಶದಲ್ಲಿ ಒಂದೇ ದಿನ 1 ಲಕ್ಷಕ್ಕೂ ಹೆಚ್ಚು ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 1 ಲಕ್ಷಕ್ಕೂ ಹೆಚ್ಚು ಮಂದಿಗೆ ಕೊವಿಡ್

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ನಡುವೆ ಭಾರತದಲ್ಲಿ ಒಂದೇ ದಿನ 1,41ಲಕ್ಷಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 1,41,986 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 285 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 40,895 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಈವರೆಗೂ 3,44,12,740 ಸೋಂಕಿತರು ಗುಣಮುಖರಾಗಿದ್ದರೆ, 4,83,463 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 4,72,169 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 304,063,804 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 5,499,445 ಮಂದಿ ಪ್ರಾಣ ಬಿಟ್ಟಿದ್ದಾರೆ. 258,448,755 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 40,115,604 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 6,04,64,426
ಭಾರತ: 3,53,68,372
ಬ್ರೆಜಿಲ್: 2,24,50,222
ಯುಕೆ: 1,41,93,228
ಫ್ರಾನ್ಸ್: 1,15,11,452
ರಷ್ಯಾ: 1,06,34,603
ಟರ್ಕಿ: 98,50,488
ಜರ್ಮನಿ: 74,58,396
ಸ್ಪೇನ್: 71,64,906
ಇಟಲಿ: 70,83,762

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 4,21,72,251
ಭಾರತ: 3,44,12,740
ಬ್ರೆಜಿಲ್: 2,15, 67,845
ಯುಕೆ: 1,06,68,648
ರಷ್ಯಾ: 96,66,161
ಟರ್ಕಿ: 92,46,866
ಫ್ರಾನ್ಸ್: 84,52,170
ಜರ್ಮನಿ: 66,92,700
ಇರಾನ್: 60,48,957
ಅರ್ಜೆಂಟೀನಾ: 54,70,724
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+