ಜ.17: ಜಗತ್ತಿನ ಯಾವ ರಾಷ್ಟ್ರದಲ್ಲಿ ಎಷ್ಟು ಕೊರೊನಾ ರೋಗಿಗಳು ಗುಣಮುಖ?

ಬೆಂಗಳೂರು, ಜನವರಿ 17: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ವೇಗ ಹೆಚ್ಚಾಗುತ್ತಿದೆ. ಇದರ ಮಧ್ಯೆ ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 329,209,880ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 5,559,352 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 267,888,541 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಒಂದೇ ದಿನ 2.87 ಲಕ್ಷಕ್ಕೂ ಅಧಿಕ ಸೋಂಕಿತ ಪ್ರಕರಣ ದಾಖಲಾಗಿದ್ದು, ಆತಂಕ ಮೂಡಿಸಿದೆ.

ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಶುರುವಾಗಿದೆ. ದೇಶದಲ್ಲಿ ಈಗಾಗಲೇ ದೈನಂದಿನ ಸೋಂಕಿತ ಪ್ರಕರಣಗಳ ಸಂಖ್ಯೆ 2,58,000 ಗಡಿ ದಾಟಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜನವರಿ 17ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 1 ಲಕ್ಷಕ್ಕೂ ಹೆಚ್ಚು ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 1 ಲಕ್ಷಕ್ಕೂ ಹೆಚ್ಚು ಮಂದಿಗೆ ಕೊವಿಡ್

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ನಡುವೆ ಭಾರತದಲ್ಲಿ ಒಂದೇ ದಿನ 2,58 ಲಕ್ಷಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 2,58,089 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 385 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 1,51,740 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಈವರೆಗೂ 35,237,461 ಸೋಂಕಿತರು ಗುಣಮುಖರಾಗಿದ್ದರೆ, 4,86,482 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 16,56,341 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 329,209,880 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 5,559,352 ಮಂದಿ ಪ್ರಾಣ ಬಿಟ್ಟಿದ್ದಾರೆ. 267,888,541 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 55,761,987 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 6,69,95,533

ಭಾರತ: 3,73,80253

ಬ್ರೆಜಿಲ್: 2,30,06,952

ಯುಕೆ: 1,52,17,280

ಫ್ರಾನ್ಸ್: 1,41,72,384

ರಷ್ಯಾ: 1,08,03.534

ಟರ್ಕಿ: 1,04,57,164

ಇಟಲಿ: 87,06,915

ಸ್ಪೇನ್: 80,93,036

ಜರ್ಮನಿ: 79,91,432

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 8,73,564

ಬ್ರೆಜಿಲ್: 6,21,099

ಭಾರತ: 4,86,482

ರಷ್ಯಾ: 3,21,320

ಮೆಕ್ಸಿಕೋ: 3,01,410

ಪೆರು: 2,03,376

ಯುಕೆ: 1,51,987

ಇಂಡೋನೇಷಿಯಾ: 1,44,104

ಇಟಲಿ: 1,41,104

ಇರಾನ್: 1,32,075

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 4,30,90,644

ಭಾರತ: 3,52,37,461

ಬ್ರೆಜಿಲ್: 2,17,10,831

ಯುಕೆ: 1,13,89,181

ರಷ್ಯಾ: 98,58,615

ಟರ್ಕಿ: 96,65,504

ಫ್ರಾನ್ಸ್: 90,19,484

ಜರ್ಮನಿ: 70,00,000

ಇರಾನ್: 60,64,646

ಅರ್ಜೆಂಟೀನಾ: 60,81,081

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+