ಜ.18: ಜಗತ್ತಿನ ಯಾವ ರಾಷ್ಟ್ರದಲ್ಲಿ ಕೊರೊನಾವೈರಸ್ ಗುಣಮುಖರ ಸಂಖ್ಯೆ ಎಷ್ಟಿದೆ?

ಬೆಂಗಳೂರು, ಜನವರಿ 18: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ವೇಗ ಹೆಚ್ಚಾಗುತ್ತಿದೆ. ಇದರ ಮಧ್ಯೆ ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 332,001,132ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 5,565,957 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 269,330,027 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಒಂದೇ ದಿನ 3.89 ಲಕ್ಷಕ್ಕೂ ಅಧಿಕ ಸೋಂಕಿತ ಪ್ರಕರಣ ದಾಖಲಾಗಿದ್ದು, ಆತಂಕ ಮೂಡಿಸಿದೆ.

ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಶುರುವಾಗಿದೆ. ದೇಶದಲ್ಲಿ ಈಗಾಗಲೇ ದೈನಂದಿನ ಸೋಂಕಿತ ಪ್ರಕರಣಗಳ ಸಂಖ್ಯೆ 2,38,000 ಗಡಿ ದಾಟಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜನವರಿ 18ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 2 ಲಕ್ಷಕ್ಕೂ ಹೆಚ್ಚು ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 2 ಲಕ್ಷಕ್ಕೂ ಹೆಚ್ಚು ಮಂದಿಗೆ ಕೊವಿಡ್

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ನಡುವೆ ಭಾರತದಲ್ಲಿ ಒಂದೇ ದಿನ 2,38 ಲಕ್ಷಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 238,018 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 302 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 1,57,421 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಈವರೆಗೂ 35,394,882 ಸೋಂಕಿತರು ಗುಣಮುಖರಾಗಿದ್ದರೆ, 486,784 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 1,736,605 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 332,001,132 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 5,565,957 ಮಂದಿ ಪ್ರಾಣ ಬಿಟ್ಟಿದ್ದಾರೆ. 269,330,027 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 57,105,148 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 6,76,31,191

ಭಾರತ: 3,76,18,271

ಬ್ರೆಜಿಲ್: 2,30,83,297

ಯುಕೆ: 1,53,05,410

ಫ್ರಾನ್ಸ್: 1,42,74,528

ರಷ್ಯಾ: 1,08,03.534

ಟರ್ಕಿ: 1,05,22,099

ಇಟಲಿ: 87,90,302

ಸ್ಪೇನ್: 84,24,503

ಜರ್ಮನಿ: 80,45,348

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 8,74,321

ಬ್ರೆಜಿಲ್: 6,21,261

ಭಾರತ: 4,86,784

ರಷ್ಯಾ: 3,21,990

ಮೆಕ್ಸಿಕೋ: 3,01,469

ಪೆರು: 2,03,550

ಯುಕೆ: 1,51,987

ಇಂಡೋನೇಷಿಯಾ: 1,44,174

ಇಟಲಿ: 1,41,391

ಇರಾನ್: 1,32,095

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 4,31,65,667

ಭಾರತ: 3,53,94,882

ಬ್ರೆಜಿಲ್: 2,17,10,831

ಯುಕೆ: 1,14,97,602

ರಷ್ಯಾ: 98,78,371

ಟರ್ಕಿ: 97,37,610

ಫ್ರಾನ್ಸ್: 91,98,995

ಜರ್ಮನಿ: 70,50,100

ಇರಾನ್: 60,66,819

ಅರ್ಜೆಂಟೀನಾ: 61,93,473

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Recommended Video

      ಅಬ್ಬಾ!ಏನ್ ಜಂಪ್ ಗುರೂ ಇದು..ಹೈ ಜಂಪ್ ನಲ್ಲಿ ಗೋಲ್ಡ್ ಮೆಡಲ್ ಫಿಕ್ಸ್ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+