ಜ.19: ವಿಶ್ವದ ಯಾವ ರಾಷ್ಟ್ರದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?
ಬೆಂಗಳೂರು, ಜನವರಿ 19: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ವೇಗ ಹೆಚ್ಚಾಗುತ್ತಿದೆ. ಇದರ ಮಧ್ಯೆ ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 335,797,865ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 5,575,701 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 271,467,563 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಒಂದೇ ದಿನ 5.46 ಲಕ್ಷಕ್ಕೂ ಅಧಿಕ ಸೋಂಕಿತ ಪ್ರಕರಣ ದಾಖಲಾಗಿದ್ದು, ಆತಂಕ ಮೂಡಿಸಿದೆ.
ಭಾರತದಲ್ಲಿ ಮಾರ್ಚ್ ವೇಳೆಗೆ 12 ವರ್ಷ ಮೇಲ್ಪಟ್ಟವರಿಗೂ ಕೊವಿಡ್-19 ಲಸಿಕೆ
ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಶುರುವಾಗಿದೆ. ದೇಶದಲ್ಲಿ ಈಗಾಗಲೇ ದೈನಂದಿನ ಸೋಂಕಿತ ಪ್ರಕರಣಗಳ ಸಂಖ್ಯೆ 2,82,000 ಗಡಿ ದಾಟಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜನವರಿ 19ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 2 ಲಕ್ಷಕ್ಕೂ ಹೆಚ್ಚು ಮಂದಿಗೆ ಕೊವಿಡ್
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ನಡುವೆ ಭಾರತದಲ್ಲಿ ಒಂದೇ ದಿನ 2,82 ಲಕ್ಷಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 282,970 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 442 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 188,157 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಈವರೆಗೂ 35,583,039 ಸೋಂಕಿತರು ಗುಣಮುಖರಾಗಿದ್ದರೆ, 487,226 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 1,830,976 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 335,797,865 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 5,575,701 ಮಂದಿ ಪ್ರಾಣ ಬಿಟ್ಟಿದ್ದಾರೆ. 271,467,563 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 58,754,601 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 6,87,67,004
ಭಾರತ: 3,79,01,241
ಬ್ರೆಜಿಲ್: 2,32,15,551
ಯುಕೆ: 1,53,99,300
ಫ್ರಾನ್ಸ್: 1,47,39,297
ರಷ್ಯಾ: 1,08,99,411
ಟರ್ಕಿ: 1,05,91,757
ಇಟಲಿ: 90,18,425
ಸ್ಪೇನ್: 85,18,975
ಜರ್ಮನಿ: 81,40,446

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 8,77,240
ಬ್ರೆಜಿಲ್: 6,21,578
ಭಾರತ: 4,87,226
ರಷ್ಯಾ: 3,23,376
ಮೆಕ್ಸಿಕೋ: 3,01,789
ಪೆರು: 2,03,645
ಯುಕೆ: 1,52,513
ಇಂಡೋನೇಷಿಯಾ: 1,44,183
ಇಟಲಿ: 1,41,825
ಇರಾನ್: 1,32,113

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 4,35,28,110
ಭಾರತ: 3,55,83,039
ಬ್ರೆಜಿಲ್: 2,17,73,085
ಯುಕೆ: 1,16,17,031
ರಷ್ಯಾ: 99,25,855
ಟರ್ಕಿ: 98,15,222
ಫ್ರಾನ್ಸ್: 94,06,719
ಜರ್ಮನಿ: 70,98,400
ಇರಾನ್: 60,68,983
ಅರ್ಜೆಂಟೀನಾ: 62,95,472
(ಮಾಹಿತಿ ಕೃಪೆ: ವರ್ಲ್ಡ್ಮೀಟರ್)