ಜ.21: ಜಗತ್ತಿನ ಯಾವ ರಾಷ್ಟ್ರದಲ್ಲಿ ಕೊರೊನಾವೈರಸ್ ಗುಣಮುಖರ ಸಂಖ್ಯೆ ಎಷ್ಟಿದೆ?

ಬೆಂಗಳೂರು, ಜನವರಿ 21: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರ ಮಧ್ಯೆ ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 343,731,667ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 5,595,447 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 275,190,944 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಒಂದೇ ದಿನ 6.92 ಲಕ್ಷಕ್ಕೂ ಅಧಿಕ ಸೋಂಕಿತ ಪ್ರಕರಣ ದಾಖಲಾಗಿದ್ದು, ಆತಂಕ ಮೂಡಿಸಿದೆ.

ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಶುರುವಾಗಿದೆ. ದೇಶದಲ್ಲಿ ಈಗಾಗಲೇ ದೈನಂದಿನ ಸೋಂಕಿತ ಪ್ರಕರಣಗಳ ಸಂಖ್ಯೆ 3,47,000 ಗಡಿ ದಾಟಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜನವರಿ 21ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 3 ಲಕ್ಷಕ್ಕೂ ಹೆಚ್ಚು ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 3 ಲಕ್ಷಕ್ಕೂ ಹೆಚ್ಚು ಮಂದಿಗೆ ಕೊವಿಡ್

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ನಡುವೆ ಭಾರತದಲ್ಲಿ ಒಂದೇ ದಿನ 3.47 ಲಕ್ಷಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 347,254 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 703 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 251,777 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಈವರೆಗೂ 38,566,027 ಸೋಂಕಿತರು ಗುಣಮುಖರಾಗಿದ್ದರೆ, 488,422 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 2,018,799 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 343,731,667 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 5,595,447 ಮಂದಿ ಪ್ರಾಣ ಬಿಟ್ಟಿದ್ದಾರೆ. 275,190,944 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 62,945,276 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 7,05,44,862

ಭಾರತ: 3,85,66,027

ಬ್ರೆಜಿಲ್: 2,35,88,921

ಯುಕೆ: 1,56,13,283

ಫ್ರಾನ್ಸ್: 1,56,00,647

ರಷ್ಯಾ: 1,09,38,261

ಟರ್ಕಿ: 1,07,36,215

ಇಟಲಿ: 94,18,256

ಸ್ಪೇನ್: 88,34,363

ಜರ್ಮನಿ: 83,97,328

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 8,83,903

ಬ್ರೆಜಿಲ್: 6,22,251

ಭಾರತ: 4,88,422

ರಷ್ಯಾ: 3,24,060

ಮೆಕ್ಸಿಕೋ: 3,02,390

ಪೆರು: 2,03,868

ಯುಕೆ: 1,53,202

ಇಂಡೋನೇಷಿಯಾ: 1,44,199

ಇಟಲಿ: 1,42,590

ಇರಾನ್: 1,32,152

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 4,40,47,799

ಭಾರತ: 3,60,58,806

ಬ್ರೆಜಿಲ್: 2,18,51,922

ಯುಕೆ: 1,18,50,874

ರಷ್ಯಾ: 99,50,333

ಟರ್ಕಿ: 99,85,596

ಫ್ರಾನ್ಸ್: 98,44,686

ಜರ್ಮನಿ: 71,78,000

ಅರ್ಜೆಂಟೀನಾ: 64,94,224

ಇರಾನ್: 60,73,412

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+