ಜ.22: ವಿಶ್ವದ ಯಾವ ರಾಷ್ಟ್ರದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?

ಬೆಂಗಳೂರು, ಜನವರಿ 22: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರ ಮಧ್ಯೆ ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 347,282,497ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 5,604,853 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 276,824,461 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಒಂದೇ ದಿನ 7.79 ಲಕ್ಷಕ್ಕೂ ಅಧಿಕ ಸೋಂಕಿತ ಪ್ರಕರಣ ದಾಖಲಾಗಿದ್ದು, ಆತಂಕ ಮೂಡಿಸಿದೆ.

ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಶುರುವಾಗಿದೆ. ದೇಶದಲ್ಲಿ ಈಗಾಗಲೇ ದೈನಂದಿನ ಸೋಂಕಿತ ಪ್ರಕರಣಗಳ ಸಂಖ್ಯೆ 3,37,000 ಗಡಿ ದಾಟಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜನವರಿ 22ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 3 ಲಕ್ಷಕ್ಕೂ ಹೆಚ್ಚು ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 3 ಲಕ್ಷಕ್ಕೂ ಹೆಚ್ಚು ಮಂದಿಗೆ ಕೊವಿಡ್

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ನಡುವೆ ಭಾರತದಲ್ಲಿ ಒಂದೇ ದಿನ 3.37 ಲಕ್ಷಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 337,704 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 489 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 242,676 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಈವರೆಗೂ 36,301,482 ಸೋಂಕಿತರು ಗುಣಮುಖರಾಗಿದ್ದರೆ, 488,911 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 2,113,338 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 347,282,497 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 5,604,853 ಮಂದಿ ಪ್ರಾಣ ಬಿಟ್ಟಿದ್ದಾರೆ. 276,824,461 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 64,853,183 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 7,13,94,579

ಭಾರತ: 3,89,03,731

ಬ್ರೆಜಿಲ್: 2,37,57,741

ಫ್ರಾನ್ಸ್: 1,60,01,498

ಯುಕೆ: 1,57,09,059

ರಷ್ಯಾ: 1,09,87,774

ಟರ್ಕಿ: 1,08,08,770

ಇಟಲಿ: 96,03,856

ಸ್ಪೇನ್: 89,75,458

ಜರ್ಮನಿ: 85,35,962

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 8,87,643

ಬ್ರೆಜಿಲ್: 6,22,647

ಭಾರತ: 4,88,911

ರಷ್ಯಾ: 3,24,752

ಮೆಕ್ಸಿಕೋ: 3,02,721

ಪೆರು: 2,03,994

ಯುಕೆ: 1,53,490

ಇಂಡೋನೇಷಿಯಾ: 1,44,201

ಇಟಲಿ: 1,42,963

ಇರಾನ್: 1,32,172

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 4,41,91,512

ಭಾರತ: 3,63,01,482

ಬ್ರೆಜಿಲ್: 2,18,51,922

ಯುಕೆ: 1,19,57,439

ಟರ್ಕಿ: 1,00,72,768

ಫ್ರಾನ್ಸ್: 1,00,63,579

ರಷ್ಯಾ: 99,75,052

ಜರ್ಮನಿ: 72,06,100

ಇರಾನ್: 60,75,730

ಅರ್ಜೆಂಟೀನಾ: 66,26,239

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+