ಜ.29: ವಿಶ್ವದ ಯಾವ ರಾಷ್ಟ್ರದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?
ಬೆಂಗಳೂರು, ಜನವರಿ 29: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರ ಮಧ್ಯೆ ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 370,878,130ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 5,669,541 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 292,821,060 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಒಂದೇ ದಿನ 5.22 ಲಕ್ಷಕ್ಕೂ ಅಧಿಕ ಸೋಂಕಿತ ಪ್ರಕರಣ ದಾಖಲಾಗಿದ್ದು, ಆತಂಕ ಮೂಡಿಸಿದೆ.
ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಶುರುವಾಗಿದೆ. ದೇಶದಲ್ಲಿ ಈಗಾಗಲೇ ದೈನಂದಿನ ಸೋಂಕಿತ ಪ್ರಕರಣಗಳ ಸಂಖ್ಯೆ 2,35,000 ಗಡಿ ದಾಟಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜನವರಿ 29ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 3 ಲಕ್ಷಕ್ಕೂ ಹೆಚ್ಚು ಮಂದಿಗೆ ಕೊವಿಡ್
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ನಡುವೆ ಭಾರತದಲ್ಲಿ ಒಂದೇ ದಿನ 2.35 ಲಕ್ಷಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 235,532 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 862 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 335,939 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 40,858,241ಕ್ಕೆ ಏರಿಕೆಯಾಗಿದೆ. ಈ ಪೈಕಿ 38,360,710 ಸೋಂಕಿತರು ಗುಣಮುಖರಾಗಿದ್ದರೆ, 493,218 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 2,004,313 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 370,878,130 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 5,669,541 ಮಂದಿ ಪ್ರಾಣ ಬಿಟ್ಟಿದ್ದಾರೆ. 292,821,060 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 72,387,529 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 7,52,71,402
ಭಾರತ: 4,08,58,241
ಬ್ರೆಜಿಲ್: 2,50,40,161
ಫ್ರಾನ್ಸ್: 1,84,76,227
ಯುಕೆ: 1,63,33,980
ರಷ್ಯಾ: 1,15,02,657
ಟರ್ಕಿ: 1,13,43,693
ಇಟಲಿ: 1,06,83,948
ಸ್ಪೇನ್: 97,79,130
ಜರ್ಮನಿ: 95,24,101

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 9,05,661
ಬ್ರೆಜಿಲ್: 6,25,948
ಭಾರತ: 4,93,218
ರಷ್ಯಾ: 3,29,443
ಮೆಕ್ಸಿಕೋ: 3,05,240
ಪೆರು: 2,05,112
ಯುಕೆ: 1,55,317
ಇಂಡೋನೇಷಿಯಾ: 1,44,268
ಇಟಲಿ: 1,45,537
ಇರಾನ್: 1,32,356

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 4,58,06,388
ಭಾರತ: 3,83,60,710
ಬ್ರೆಜಿಲ್: 2,21,62,914
ಯುಕೆ: 1,31,09,694
ಫ್ರಾನ್ಸ್: 1,16,84,843
ಟರ್ಕಿ: 1,06,52,930
ರಷ್ಯಾ: 1,01,59,197
ಜರ್ಮನಿ: 75,32,600
ಅರ್ಜೆಂಟೀನಾ: 73,87,559
ಇರಾನ್: 60,95,414
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications