ಜ.31: ವಿಶ್ವದ ಯಾವ ರಾಷ್ಟ್ರದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?
ಬೆಂಗಳೂರು, ಜನವರಿ 29: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರ ಮಧ್ಯೆ ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 375,633,935ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 5,683,141 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 296,766,229 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಒಂದೇ ದಿನ 92 ಸಾವಿರಕ್ಕೂ ಅಧಿಕ ಸೋಂಕಿತ ಪ್ರಕರಣ ದಾಖಲಾಗಿವೆ.
ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಶುರುವಾಗಿದೆ. ದೇಶದಲ್ಲಿ ಈಗಾಗಲೇ ದೈನಂದಿನ ಸೋಂಕಿತ ಪ್ರಕರಣಗಳ ಸಂಖ್ಯೆ 2,09,000 ಗಡಿ ದಾಟಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜನವರಿ 31ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 2 ಲಕ್ಷಕ್ಕೂ ಹೆಚ್ಚು ಮಂದಿಗೆ ಕೊವಿಡ್
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ನಡುವೆ ಭಾರತದಲ್ಲಿ ಒಂದೇ ದಿನ 2.09 ಲಕ್ಷಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 209,918 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 940 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 262,628 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 41,302,440ಕ್ಕೆ ಏರಿಕೆಯಾಗಿದೆ. ಈ ಪೈಕಿ 38,976,122 ಸೋಂಕಿತರು ಗುಣಮುಖರಾಗಿದ್ದರೆ, 495,050 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 1,831,268 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 375,633,935 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 5,683,141 ಮಂದಿ ಪ್ರಾಣ ಬಿಟ್ಟಿದ್ದಾರೆ. 296,766,229 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 73,184,565 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 7,55,78,076
ಭಾರತ: 4,13,02,440
ಬ್ರೆಜಿಲ್: 2,53,51,489
ಫ್ರಾನ್ಸ್: 1,90,58,073
ಯುಕೆ: 1,64,68,522
ರಷ್ಯಾ: 1,18,61,077
ಟರ್ಕಿ: 1,15,26,621
ಇಟಲಿ: 1,09,25,485
ಸ್ಪೇನ್: 97,79,130
ಜರ್ಮನಿ: 97,76,648

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 9,07,190
ಬ್ರೆಜಿಲ್: 6,26,923
ಭಾರತ: 4,95,050
ರಷ್ಯಾ: 3,31,349
ಮೆಕ್ಸಿಕೋ: 3,05,893
ಪೆರು: 2,05,505
ಯುಕೆ: 1,55,698
ಇಂಡೋನೇಷಿಯಾ: 1,44,303
ಇಟಲಿ: 1,46,149
ಇರಾನ್: 1,32,424

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 4,59,37,985
ಭಾರತ: 3,89,76,122
ಬ್ರೆಜಿಲ್: 2,21,63,750
ಯುಕೆ: 1,34,84,929
ಫ್ರಾನ್ಸ್: 1,20,74,531
ಟರ್ಕಿ: 1,08,17,721
ರಷ್ಯಾ: 1,02,48,281
ಜರ್ಮನಿ: 76,22,400
ಅರ್ಜೆಂಟೀನಾ: 76,04,760
ಇರಾನ್: 61,02,290
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications