Infographics: ಜುಲೈ 11ರಂದು ಜಗತ್ತಿನಲ್ಲಿ ಕೋವಿಡ್-19 ಅಂಕಿ-ಅಂಶ ತಿಳಿಯಿರಿ

ನವದೆಹಲಿ, ಜುಲೈ 11: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಕ್ರಮೇಣ ಏರಿಕೆ ಆಗುತ್ತಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 560,887,121ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,373,440 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 533,894,004 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಭಾರತದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ನಾಲ್ಕು ಸಾವಿರದ ಗಡಿ ದಾಟಿದೆ. ಇದರ ಮಧ್ಯೆ ಕೊರೊನಾ ವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾ ವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜುಲೈ 11ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 14,494 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 14,494 ಮಂದಿಗೆ ಕೊವಿಡ್

ಕೊರೊನಾ ವೈರಸ್ ಹೊಸ ರೂಪಾಂತರ ಮತ್ತು ತಳಿಗಳು ಪತ್ತೆಯಾಗುತ್ತಿರುವುದರ ಮಧ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಭಾರತದಲ್ಲಿ ಒಂದೇ ದಿನ 14,494 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 26 ಮಂದಿ ಉಸಿರು ಚೆಲ್ಲಿದ್ದು, 14,629 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 130,713ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 43,639,329ಕ್ಕೆ ಏರಿಕೆಯಾಗಿದೆ. ಇದರ ಮಧ್ಯೆ ಇದುವರೆಗೂ 42,983,162 ಸೋಂಕಿತರು ಗುಣಮುಖರಾಗಿದ್ದಾರೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 525,454 ಮಂದಿ ಪ್ರಾಣ ಬಿಟ್ಟಿದ್ದಾರೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 560,887,121 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,373,440 ಮಂದಿ ಪ್ರಾಣ ಬಿಟ್ಟಿದ್ದಾರೆ. 533,894,004 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 20,619,677 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 9,03,38,657

ಭಾರತ: 4,36,39,329

ಬ್ರೆಜಿಲ್: 3,28,96,464

ಫ್ರಾನ್ಸ್: 3,21,15,604

ಜರ್ಮನಿ: 2,90,25,760

ಯುಕೆ: 2,28,83,995

ಇಟಲಿ: 1,94,39,501

ದಕ್ಷಿಣ ಕೊರಿಯಾ: 1,85,24,538

ರಷ್ಯಾ: 1,84,62,211

ಟರ್ಕಿ: 1,51,80,444

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾ ವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,45,792

ಬ್ರೆಜಿಲ್: 6,73,659

ಭಾರತ: 5,25,454

ರಷ್ಯಾ: 3,81,583

ಮೆಕ್ಸಿಕೋ: 3,26,085

ಪೆರು: 2,13,685

ಯುಕೆ: 1,80,718

ಇಟಲಿ: 1,69,106

ಇಂಡೋನೇಷಿಯಾ: 1,56,791

ಫ್ರಾನ್ಸ್: 1,50,017

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 8,57,89,558

ಭಾರತ: 4,29,83,162

ಬ್ರೆಜಿಲ್: 3,11,81,066

ಫ್ರಾನ್ಸ್: 3,00,31,398

ಜರ್ಮನಿ: 2,72,82,500

ಯುಕೆ: 2,22,64,459

ರಷ್ಯಾ: 1,78,88,560

ಇಟಲಿ: 1,79,70,323

ಟರ್ಕಿ: 1,50,35,727

ಸ್ಪೇನ್: 1,23,19,484

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+