Infographics: ಜುಲೈ 12ರಂದು ಜಗತ್ತಿನಲ್ಲಿ ಕೋವಿಡ್-19 ಅಂಕಿ-ಅಂಶ ತಿಳಿಯಿರಿ

ನವದೆಹಲಿ, ಜುಲೈ 12: ಜಾಗತಿಕ ಮಟ್ಟದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗು ಕಡಿಮೆ ಆಯ್ತು ಎನ್ನುವಂತೆಯೂ ಇಲ್ಲ, ಹೆಚ್ಚಾಯಿತು ಎಂದು ಹೇಳುವಂತೆಯೂ ಇಲ್ಲ. ಏಕೆಂದರೆ ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳು ಹಾಗಿವೆ.

ವಿಶ್ವದೆಲ್ಲೆಡೆ ಒಟ್ಟು 561,918,920ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,375,042 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 534,813,581 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ನಾಲ್ಕು ಸಾವಿರದ ಗಡಿ ದಾಟಿದೆ. ಇದರ ಮಧ್ಯೆ ಕೊರೊನಾ ವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾ ವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜುಲೈ 12ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 13,615 ಮಂದಿಗೆ ಕೋವಿಡ್

ದೇಶದಲ್ಲಿ ಒಂದೇ ದಿನ 13,615 ಮಂದಿಗೆ ಕೋವಿಡ್

ಕೊರೊನಾ ವೈರಸ್ ಹೊಸ ರೂಪಾಂತರ ಮತ್ತು ತಳಿಗಳು ಪತ್ತೆಯಾಗುತ್ತಿರುವುದರ ಮಧ್ಯೆ ಪ್ರಕರಣಗಳ ಸಂಖ್ಯೆ ಐದಂಕಿ ದಾಟಿದೆ. ಭಾರತದಲ್ಲಿ ಒಂದೇ ದಿನ 13,615 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 20 ಮಂದಿ ಮೃತಪಟ್ಟಿದ್ದು, 13,265 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 131,043ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 43,652,944ಕ್ಕೆ ಏರಿಕೆಯಾಗಿದೆ. ಇದರ ಮಧ್ಯೆ ಇದುವರೆಗೂ 42,996,427 ಸೋಂಕಿತರು ಗುಣಮುಖರಾಗಿದ್ದಾರೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 525,474 ಮಂದಿ ಪ್ರಾಣ ಬಿಟ್ಟಿದ್ದಾರೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 561,918,920 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,375,042 ಮಂದಿ ಪ್ರಾಣ ಬಿಟ್ಟಿದ್ದಾರೆ. 534,813,581 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 20,730,297 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೋವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೋವಿಡ್-19 ಬಾಧಿತ ಟಾಪ್ 10 ದೇಶಗಳು

ಕೋವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 9,04,91,960

ಭಾರತ: 4,36,52,944

ಬ್ರೆಜಿಲ್: 3,29,40,507

ಫ್ರಾನ್ಸ್: 3,23,66,941

ಜರ್ಮನಿ: 2,91,80,489

ಯುಕೆ: 2,28,83,995

ಇಟಲಿ: 1,95,23,262

ದಕ್ಷಿಣ ಕೊರಿಯಾ: 1,85,61,861

ರಷ್ಯಾ: 1,84,68,310

ಟರ್ಕಿ: 1,51,80,444

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾ ವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,46,232

ಬ್ರೆಜಿಲ್: 6,73,814

ಭಾರತ: 5,25,474

ರಷ್ಯಾ: 3,81,669

ಮೆಕ್ಸಿಕೋ: 3,26,097

ಪೆರು: 2,13,695

ಯುಕೆ: 1,80,718

ಇಟಲಿ: 1,69,233

ಇಂಡೋನೇಷಿಯಾ: 1,56,798

ಫ್ರಾನ್ಸ್: 1,50,179

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 8,60,26,441

ಭಾರತ: 4,29,83,162

ಬ್ರೆಜಿಲ್: 3,12,57,740

ಫ್ರಾನ್ಸ್: 3,01,26,453

ಜರ್ಮನಿ: 2,73,90,700

ಯುಕೆ: 2,22,79,520

ರಷ್ಯಾ: 1,78,94,065

ಇಟಲಿ: 1,80,50,011

ಟರ್ಕಿ: 1,50,35,727

ಸ್ಪೇನ್: 1,23,19,484

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+