Infographics: ಜುಲೈ 14ರಂದು ಜಗತ್ತಿನಲ್ಲಿ ಕೋವಿಡ್-19 ಅಂಕಿ-ಅಂಶ ತಿಳಿಯಿರಿ

ನವದೆಹಲಿ, ಜುಲೈ 14: ಜಾಗತಿಕ ಮಟ್ಟದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗು ಹಾವಳಿ ಮತ್ತೆ ಹೆಚ್ಚಾಗುತ್ತಿದೆ. ಇದರ ಮಧ್ಯೆ ಜಗತ್ತಿನಲ್ಲಿ ವರದಿ ಆಗುತ್ತಿರುವ ಕೋವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳು ಹೀಗಿವೆ.

ವಿಶ್ವದೆಲ್ಲೆಡೆ ಒಟ್ಟು 564,268,149ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,379,755 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 536,316,172 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಭಾರತದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ನಾಲ್ಕು ಸಾವಿರದ ಗಡಿ ದಾಟಿದೆ. ಇದರ ಮಧ್ಯೆ ಕೊರೊನಾ ವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾ ವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜುಲೈ 14ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 20,139 ಮಂದಿಗೆ ಕೋವಿಡ್

ದೇಶದಲ್ಲಿ ಒಂದೇ ದಿನ 20,139 ಮಂದಿಗೆ ಕೋವಿಡ್

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 20,139 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 38 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 16,482 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 43,689,989ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ, ಇದುವರೆಗೂ 43,028,356 ಸೋಂಕಿತರು ಗುಣಮುಖರಾಗಿದ್ದು, 525,557 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 136,076ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿತು ಎನ್ನುವಷ್ಟರಲ್ಲೇ ಪಾಸಿಟಿವಿಟಿ ದರದಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 3,94,774 ಮಂದಿಗೆ ಕೋವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ. ದೇಶದಲ್ಲಿ ಇದುವರೆಗೂ 86,81,64,348 ಜನರಿಗೆ ಕೊರೊನಾ ವೈರಸ್ ಸೋಂಕಿತ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಈ ಹಂತದಲ್ಲಿ ಕಳೆದ ಒಂದು ದಿನದಲ್ಲಿ ಕೋವಿಡ್-19 ಪಾಸಿಟಿವಿಟಿ ದರ ಶೇ. 5.10ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 564,268,149 ಕೋವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,379,755 ಮಂದಿ ಪ್ರಾಣ ಬಿಟ್ಟಿದ್ದಾರೆ. 536,316,172 ಕೋವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 21,572,222 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೋವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೋವಿಡ್-19 ಬಾಧಿತ ಟಾಪ್ 10 ದೇಶಗಳು

ಕೋವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 9,09,09,760

ಭಾರತ: 4,36,89,989

ಬ್ರೆಜಿಲ್: 3,30,76,779

ಫ್ರಾನ್ಸ್: 3,26,76,589

ಜರ್ಮನಿ: 2,94,60,249

ಯುಕೆ: 2,28,83,995

ಇಟಲಿ: 1,97,78,911

ದಕ್ಷಿಣ ಕೊರಿಯಾ: 1,86,41,278

ರಷ್ಯಾ: 1,84,72,239

ಟರ್ಕಿ: 1,51,80,444

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾ ವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,47,794

ಬ್ರೆಜಿಲ್: 6,74,554

ಭಾರತ: 5,25,557

ರಷ್ಯಾ: 3,81,711

ಮೆಕ್ಸಿಕೋ: 3,26,261

ಪೆರು: 2,13,731

ಯುಕೆ: 1,80,718

ಇಟಲಿ: 1,69,496

ಇಂಡೋನೇಷಿಯಾ: 1,56,818

ಫ್ರಾನ್ಸ್: 1,50,414

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾ ವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 8,62,50,325

ಭಾರತ: 4,30,28,356

ಬ್ರೆಜಿಲ್: 3,14,14,937

ಫ್ರಾನ್ಸ್: 3,02,84,037

ಜರ್ಮನಿ: 2,75,48,900

ಯುಕೆ: 2,23,08,442

ರಷ್ಯಾ: 1,78,97,428

ಇಟಲಿ: 1,82,17,525

ಟರ್ಕಿ: 1,50,35,727

ಸ್ಪೇನ್: 1,23,70,046

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+