Infographics: ಜುಲೈ 16ರಂದು ಜಗತ್ತಿನಲ್ಲಿ ಕೋವಿಡ್-19 ಅಂಕಿ-ಅಂಶ ತಿಳಿಯಿರಿ
ನವದೆಹಲಿ, ಜುಲೈ 16: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಾವಳಿ ಮತ್ತೆ ಹೆಚ್ಚಾಗುತ್ತಿದೆ. ಇದರ ಮಧ್ಯೆ ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳು ಹೀಗಿವೆ.
ವಿಶ್ವದೆಲ್ಲೆಡೆ ಒಟ್ಟು 566,654,585ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,386,271 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 537,859,767 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.
ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು 20 ಸಾವಿರದ ಗಡಿ ದಾಟಿದೆ. ಕೋವಿಡ್-19 ಸೋಂಕು ಮತ್ತೆ ಜನರಲ್ಲಿ ಭಯವನ್ನು ಹುಟ್ಟು ಹಾಕುವ ಮಟ್ಟಕ್ಕೆ ಏರಿಕೆ ಆಗುತ್ತಿದೆ.
ಇದರ ಮಧ್ಯೆ ಕೊರೊನಾ ವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾ ವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜುಲೈ 16ರ ಪ್ರಕಾರ) ಇಲ್ಲಿದೆ.


ದೇಶದಲ್ಲಿ ಒಂದೇ ದಿನ 20,044 ಮಂದಿಗೆ ಕೊವಿಡ್
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 20,044 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 56 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 18,301 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 43,689,989ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ, ಇದುವರೆಗೂ 43,730,071 ಸೋಂಕಿತರು ಗುಣಮುಖರಾಗಿದ್ದು, 525,660 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 140,760ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 566,654,585 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,386,271 ಮಂದಿ ಪ್ರಾಣ ಬಿಟ್ಟಿದ್ದಾರೆ. 537,859,767 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 22,408,547 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 9,11,70,571
ಭಾರತ: 4,37,30,071
ಬ್ರೆಜಿಲ್: 3,32,50,117
ಫ್ರಾನ್ಸ್: 3,28,18,901
ಜರ್ಮನಿ: 2,96,92,989
ಯುಕೆ: 2,30,75,360
ಇಟಲಿ: 1,99,85,479
ದಕ್ಷಿಣ ಕೊರಿಯಾ: 1,87,21,415
ರಷ್ಯಾ: 1,84,85,632
ಟರ್ಕಿ: 1,52,97,539

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 10,48,693
ಬ್ರೆಜಿಲ್: 6,75,145
ಭಾರತ: 5,25,660
ರಷ್ಯಾ: 3,81,835
ಮೆಕ್ಸಿಕೋ: 3,26,420
ಪೆರು: 2,13,769
ಯುಕೆ: 1,81,580
ಇಟಲಿ: 1,69,735
ಇಂಡೋನೇಷಿಯಾ: 1,56,839
ಫ್ರಾನ್ಸ್: 1,50,576

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 8,64,68,018
ಭಾರತ: 4,30,63,651
ಬ್ರೆಜಿಲ್: 3,15,13,330
ಫ್ರಾನ್ಸ್: 3,04,44,063
ಜರ್ಮನಿ: 2,76,61,800
ಯುಕೆ: 2,23,38,952
ರಷ್ಯಾ: 1,79,06,326
ಇಟಲಿ: 1,83,88,978
ಟರ್ಕಿ: 1,50,96,774
ಸ್ಪೇನ್: 1,23,96,745
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications