Infographics: ಜುಲೈ 18ರಂದು ಜಗತ್ತಿನಲ್ಲಿ ಕೋವಿಡ್-19 ಅಂಕಿ-ಅಂಶ ತಿಳಿಯಿರಿ
ನವದೆಹಲಿ, ಜುಲೈ 18: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಾವಳಿ ಮತ್ತೆ ಹೆಚ್ಚಾಗುತ್ತಿದೆ. ಇದರ ಮಧ್ಯೆ ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳು ಹೀಗಿವೆ.
ವಿಶ್ವದೆಲ್ಲೆಡೆ ಒಟ್ಟು 567,857,409ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,387,812 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 539,000,501 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ.
ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು 16 ಸಾವಿರದ ಗಡಿ ದಾಟಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾ ವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜುಲೈ 18ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 16,935 ಮಂದಿಗೆ ಕೊವಿಡ್
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 16,935 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 51 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 16,069 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 43,767,534ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ, ಇದುವರೆಗೂ 43,097,510 ಸೋಂಕಿತರು ಗುಣಮುಖರಾಗಿದ್ದು, 525,760 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 144,264ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 567,857,409 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,387,812 ಮಂದಿ ಪ್ರಾಣ ಬಿಟ್ಟಿದ್ದಾರೆ. 539,000,501 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 22,469,096 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 9,12,75,149
ಭಾರತ: 4,37,67,534
ಬ್ರೆಜಿಲ್: 3,33,01,118
ಫ್ರಾನ್ಸ್: 3,30,16,578
ಜರ್ಮನಿ: 2,96,92,989
ಯುಕೆ: 2,30,75,360
ಇಟಲಿ: 2,01,45,859
ದಕ್ಷಿಣ ಕೊರಿಯಾ: 1,87,88,056
ರಷ್ಯಾ: 1,84,90,296
ಟರ್ಕಿ: 1,52,97,539

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾ ವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 10,48,843
ಬ್ರೆಜಿಲ್: 6,75,408
ಭಾರತ: 5,25,760
ರಷ್ಯಾ: 3,81,881
ಮೆಕ್ಸಿಕೋ: 3,26,504
ಪೆರು: 2,13,825
ಯುಕೆ: 1,81,580
ಇಟಲಿ: 1,69,925
ಇಂಡೋನೇಷಿಯಾ: 1,56,849
ಫ್ರಾನ್ಸ್: 1,50,576

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾ ವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 8,66,46,220
ಭಾರತ: 4,30,97,510
ಬ್ರೆಜಿಲ್: 3,15,56,393
ಫ್ರಾನ್ಸ್: 3,05,27,965
ಜರ್ಮನಿ: 2,77,86,700
ಯುಕೆ: 2,23,75,874
ರಷ್ಯಾ: 1,79,08,809
ಇಟಲಿ: 1,85,10,884
ಟರ್ಕಿ: 1,50,96,774
ಸ್ಪೇನ್: 1,23,96,745
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications