Infographics: ಜುಲೈ 19ರ ವೇಳೆಗೆ ಜಗತ್ತಿನಲ್ಲಿ ಎಷ್ಟರ ಮಟ್ಟಿಗಿದೆ ಕೋವಿಡ್-19 ಅಪಾಯ?

ನವದೆಹಲಿ, ಜುಲೈ 19: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಾವಳಿ ಮತ್ತೆ ಹೆಚ್ಚಾಗುತ್ತಿದೆ. ಇದರ ಮಧ್ಯೆ ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳು ಹೀಗಿವೆ.

ವಿಶ್ವದೆಲ್ಲೆಡೆ ಒಟ್ಟು 568,780,357ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,389,731 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 540,043,256 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು 15 ಸಾವಿರದ ಗಡಿ ದಾಟಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾ ವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜುಲೈ 19ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 15,528 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 15,528 ಮಂದಿಗೆ ಕೊವಿಡ್

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 15,528 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 25 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 16,113 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 43,783,062ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ, ಇದುವರೆಗೂ 43,113,623 ಸೋಂಕಿತರು ಗುಣಮುಖರಾಗಿದ್ದು, 525,785 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 143,654ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 568,780,357 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,389,731 ಮಂದಿ ಪ್ರಾಣ ಬಿಟ್ಟಿದ್ದಾರೆ. 540,043,256 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 22,347,370 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 9,14,29,409

ಭಾರತ: 4,37,83,062

ಬ್ರೆಜಿಲ್: 3,33,39,815

ಫ್ರಾನ್ಸ್: 3,30,34,311

ಜರ್ಮನಿ: 2,98,53,680

ಯುಕೆ: 2,30,75,360

ಇಟಲಿ: 2,01,77,910

ದಕ್ಷಿಣ ಕೊರಿಯಾ: 1,88,61,593

ರಷ್ಯಾ: 1,84,99,044

ಟರ್ಕಿ: 1,52,97,539

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,49,274

ಬ್ರೆಜಿಲ್: 6,75,551

ಭಾರತ: 5,25,785

ರಷ್ಯಾ: 3,81,960

ಮೆಕ್ಸಿಕೋ: 3,26,523

ಪೆರು: 2,13,840

ಯುಕೆ: 1,81,580

ಇಟಲಿ: 1,70,037

ಇಂಡೋನೇಷಿಯಾ: 1,56,859

ಫ್ರಾನ್ಸ್: 1,50,835

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 8,67,52,569

ಭಾರತ: 4,31,13,623

ಬ್ರೆಜಿಲ್: 3,16,40,771

ಫ್ರಾನ್ಸ್: 3,06,74,954

ಜರ್ಮನಿ: 2,79,06,500

ಯುಕೆ: 2,23,96,774

ರಷ್ಯಾ: 1,79,15,526

ಇಟಲಿ: 1,85,53,478

ಟರ್ಕಿ: 1,50,96,774

ಸ್ಪೇನ್: 1,23,96,745

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+