Infographics: ಜುಲೈ 22ರಂದು ಜಗತ್ತಿನಲ್ಲಿ ಕೋವಿಡ್-19 ಅಂಕಿ-ಅಂಶ
ನವದೆಹಲಿ, ಜುಲೈ 22: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಾವಳಿ ಮತ್ತೆ ಹೆಚ್ಚಾಗುತ್ತಿದೆ. ಇದರ ಮಧ್ಯೆ ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳು ಹೀಗಿವೆ.
ವಿಶ್ವದೆಲ್ಲೆಡೆ ಒಟ್ಟು 572,913,940ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,398,724 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 542,902,752 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಜಾಗತಿಕ ಅಂಕಿ-ಅಂಶಗಳು ತಿಳಿಸಿವೆ.
ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು 21 ಸಾವಿರದ ಗಡಿ ದಾಟಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾ ವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜುಲೈ 22ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 21,880 ಮಂದಿಗೆ ಕೊವಿಡ್
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 21,880 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 60 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 21,219 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 43,847,065ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ, ಇದುವರೆಗೂ 43,171,653 ಸೋಂಕಿತರು ಗುಣಮುಖರಾಗಿದ್ದು, 525,930 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 149,482ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 572,913,940 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,398,724 ಮಂದಿ ಪ್ರಾಣ ಬಿಟ್ಟಿದ್ದಾರೆ. 542,902,752 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 23,612,464 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 9,19,42,744
ಭಾರತ: 4,38,47,065
ಬ್ರೆಜಿಲ್: 3,35,06,282
ಫ್ರಾನ್ಸ್: 3,33,39,350
ಜರ್ಮನಿ: 3,01,31,303
ಯುಕೆ: 2,32,12,565
ಇಟಲಿ: 2,04,67,349
ದಕ್ಷಿಣ ಕೊರಿಯಾ: 1,90,77,659
ರಷ್ಯಾ: 1,85,11,120
ಟರ್ಕಿ: 1,55,24,071

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 10,51,235
ಬ್ರೆಜಿಲ್: 6,76,551
ಭಾರತ: 5,25,930
ರಷ್ಯಾ: 3,82,039
ಮೆಕ್ಸಿಕೋ: 3,26,879
ಪೆರು: 2,13,918
ಯುಕೆ: 1,82,727
ಇಟಲಿ: 1,70,527
ಇಂಡೋನೇಷಿಯಾ: 1,56,880
ಫ್ರಾನ್ಸ್: 1,51,237

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 8,71,07,075
ಭಾರತ: 4,31,71,653
ಬ್ರೆಜಿಲ್: 3,18,46,441
ಫ್ರಾನ್ಸ್: 3,10,57,688
ಜರ್ಮನಿ: 2,81,14,300
ಯುಕೆ: 2,24,54,371
ಇಟಲಿ: 1,88,41,001
ರಷ್ಯಾ: 1,79,24,372
ಟರ್ಕಿ: 1,52,21,506
ಸ್ಪೇನ್: 1,24,53,757
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications