Infographics: ಜುಲೈ 25ರಂದು ಜಗತ್ತಿನಲ್ಲಿ ಹೇಗಿದೆ ಕೊರೊನಾ ವೈರಸ್ ಕಥೆ?
ನವದೆಹಲಿ, ಜುಲೈ 25: ಜಾಗತಿಕ ಮಟ್ಟದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗು ಹಾವಳಿ ಮತ್ತೆ ಹೆಚ್ಚಾಗುತ್ತಿದೆ. ಇದರ ಮಧ್ಯೆ ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳು ಹೀಗಿವೆ.
ವಿಶ್ವದೆಲ್ಲೆಡೆ ಒಟ್ಟು 575,430,244ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,403,511 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 545,216,650 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಜಾಗತಿಕ ಅಂಕಿ-ಅಂಶಗಳು ತಿಳಿಸಿವೆ.
Breaking: ದೇಶದಲ್ಲಿ 20 ಸಾವಿರದಿಂದ ಕೆಳಗಿಳಿದ ಕೊರೊನಾ ಪ್ರಕರಣಗಳು
ಭಾರತದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು 16 ಸಾವಿರದ ಗಡಿ ದಾಟಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾ ವೈರಸ್ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜುಲೈ 25ರ ಪ್ರಕಾರ) ಇಲ್ಲಿದೆ.
ದೇಶದಲ್ಲಿ ಒಂದೇ ದಿನ 16,866 ಮಂದಿಗೆ ಕೋವಿಡ್
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 16,866 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಇದೇ ಅವಧಿಯಲ್ಲಿ 41 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 18,148 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 43,905,621ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ, ಇದುವರೆಗೂ 43,228,670 ಸೋಂಕಿತರು ಗುಣಮುಖರಾಗಿದ್ದು, 526,074 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 150,877ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 575,430,244 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,403,511 ಮಂದಿ ಪ್ರಾಣ ಬಿಟ್ಟಿದ್ದಾರೆ. 545,216,650 ಕೋವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 23,810,083 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೋವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.
ಕೋವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 9,21,94,892
ಭಾರತ: 4,39,05,621
ಬ್ರೆಜಿಲ್: 3,35,91,356
ಫ್ರಾನ್ಸ್: 3,35,32,262
ಜರ್ಮನಿ: 3,03,31,131
ಯುಕೆ: 2,32,12,565
ಇಟಲಿ: 2,06,60,065
ದಕ್ಷಿಣ ಕೊರಿಯಾ: 1,91,47,496
ರಷ್ಯಾ: 1,85,38,826
ಟರ್ಕಿ: 1,55,24,071
ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾ ವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 10,51,996
ಬ್ರೆಜಿಲ್: 6,77,021
ಭಾರತ: 5,26,024
ರಷ್ಯಾ: 3,82,189
ಮೆಕ್ಸಿಕೋ: 3,27,089
ಪೆರು: 2,14,028
ಯುಕೆ: 1,82,727
ಇಟಲಿ: 1,70,875
ಇಂಡೋನೇಷಿಯಾ: 1,56,916
ಫ್ರಾನ್ಸ್: 1,51,350
ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾ ವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 8,74,32,184
ಭಾರತ: 4,32,28,670
ಬ್ರೆಜಿಲ್: 3,19,54,094
ಫ್ರಾನ್ಸ್: 3,13,00,823
ಜರ್ಮನಿ: 2,83,72,700
ಯುಕೆ: 2,25,16,990
ಇಟಲಿ: 1,90,59,325
ರಷ್ಯಾ: 1,79,42,908
ಟರ್ಕಿ: 1,52,21,506
ಸ್ಪೇನ್: 1,24,90,889
(ಮಾಹಿತಿ ಕೃಪೆ: ವರ್ಲ್ಡ್ಮೀಟರ್)