ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Infographics: ಆಗಸ್ಟ್ 27ರಂದು ಜಗತ್ತಿನಲ್ಲಿ ಕೋವಿಡ್-19 ಅಂಕಿ-ಅಂಶ ತಿಳಿಯಿರಿ

|
Google Oneindia Kannada News

ನವದೆಹಲಿ, ಆಗಸ್ಟ್ 27: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಕ್ರಮೇಣ ಏರಿಕೆ ಆಗುತ್ತಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 605,202,174ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,486,277 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 580,130,187 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ನಾಲ್ಕು ಸಾವಿರದ ಗಡಿ ದಾಟಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಆಗಸ್ಟ್ 27ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 9,520 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 9,520 ಮಂದಿಗೆ ಕೊವಿಡ್

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9,520 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 41 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 12,875 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 44,398,696ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ, ಇದುವರೆಗೂ 43,783,788 ಸೋಂಕಿತರು ಗುಣಮುಖರಾಗಿದ್ದು, 527,597 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 87,311ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊವಿಡ್-19 ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿತು ಎನ್ನುವಷ್ಟರಲ್ಲೇ ಪಾಸಿಟಿವಿಟಿ ದರದಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 3,81,205 ಮಂದಿಗೆ ಕೋವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ. ದೇಶದಲ್ಲಿ ಇದುವರೆಗೂ 88,47,20,250 ಜನರಿಗೆ ಕೊರೊನಾ ವೈರಸ್ ಸೋಂಕಿತ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 605,202,174 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,486,277 ಮಂದಿ ಪ್ರಾಣ ಬಿಟ್ಟಿದ್ದಾರೆ. 580,130,187 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 18,585,710 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 9,59,70,007

ಭಾರತ: 4,43,98,696

ಫ್ರಾನ್ಸ್: 3,44,46,854

ಬ್ರೆಜಿಲ್ : 3,43,68,909

ಜರ್ಮನಿ: 3,20,41,348

ಯುಕೆ: 2,34,92,875

ದಕ್ಷಿಣ ಕೊರಿಯಾ: 2,28,98,523

ಇಟಲಿ: 2,17,67,060

ರಷ್ಯಾ: 1,93,59,066

ಜಪಾನ್: 1,81,80,425

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,68,843

ಬ್ರೆಜಿಲ್: 6,83,464

ಭಾರತ: 5,27,597

ರಷ್ಯಾ: 3,84,000

ಮೆಕ್ಸಿಕೋ: 3,29,338

ಪೆರು: 2,15,556

ಯುಕೆ: 1,87,761

ಇಟಲಿ: 1,75,226

ಇಂಡೋನೇಷಿಯಾ: 1,57,478

ಫ್ರಾನ್ಸ್: 1,53,857

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 9,14,19,363

ಭಾರತ: 4,37,83,788

ಫ್ರಾನ್ಸ್: 3,38,99,183

ಬ್ರೆಜಿಲ್: 3,33,60,772

ಜರ್ಮನಿ: 3,10,47,000

ಯುಕೆ: 2,31,62,780

ಇಟಲಿ: 2,08,94,012

ರಷ್ಯಾ: 1,84,67,738

ಜಪಾನ್: 1,60,75,067

ಸ್ಪೇನ್: 1,30,92,617

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

English summary
Covid 19 Info: The world is seeing a surge in the number of coronavirus cases. As on August 27th the total cases are at 605,202,174, with death is 6,486,277. The total number of recoveries is 580,130,187.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X