Infographics: ಜುಲೈ 30ರಂದು ಜಗತ್ತಿನಲ್ಲಿ ಕೊರೊನಾ ವೈರಸ್ ಅಂಕಿ-ಅಂಶ

ನವದೆಹಲಿ, ಜುಲೈ 30: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಾವಳಿ ಮತ್ತೆ ಹೆಚ್ಚಾಗುತ್ತಿದೆ. ಇದರ ಮಧ್ಯೆ ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳು ಕುರಿತು ವಿಶೇಷ ವರದಿಯನ್ನು ಓದಿ.
ವಿಶ್ವದೆಲ್ಲೆಡೆ ಒಟ್ಟು 581,239,154ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,418,219 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 551,058,829 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಜಾಗತಿಕ ಅಂಕಿ-ಅಂಶಗಳು ತಿಳಿಸಿವೆ.

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು 20 ಸಾವಿರದ ಗಡಿ ದಾಟಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾ ವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜುಲೈ 30ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 20,408 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 20,408 ಮಂದಿಗೆ ಕೊವಿಡ್

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 20,408 ಜನರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ. ಇದೇ ಅವಧಿಯಲ್ಲಿ 54 ಮಂದಿ ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದರೆ, 20,958 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 44,000,138ಕ್ಕೆ ಏರಿಕೆಯಾಗಿದೆ. ಇದರ ಹೊರತಾಗಿ, ಇದುವರೆಗೂ 43,330,442 ಸೋಂಕಿತರು ಗುಣಮುಖರಾಗಿದ್ದು, 526,312 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 143,384ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 581,239,154 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,418,219 ಮಂದಿ ಪ್ರಾಣ ಬಿಟ್ಟಿದ್ದಾರೆ. 551,058,829 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 23,762,106 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 9,30,54,184
ಭಾರತ: 4,40,00,138
ಬ್ರೆಜಿಲ್: 3,37,95,192
ಫ್ರಾನ್ಸ್: 3,37,86,766
ಜರ್ಮನಿ: 3,08,53,312
ಯುಕೆ: 2,33,04,479
ಇಟಲಿ: 2,09,52,476
ದಕ್ಷಿಣ ಕೊರಿಯಾ: 1,97,02,461
ರಷ್ಯಾ: 1,85,89,221
ಟರ್ಕಿ: 1,58,89,495

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 10,55,020
ಬ್ರೆಜಿಲ್: 6,78,375
ಭಾರತ: 5,26,312
ರಷ್ಯಾ: 3,82,395
ಮೆಕ್ಸಿಕೋ: 3,27,604
ಪೆರು: 2,14,154
ಯುಕೆ: 1,83,953
ಇಟಲಿ: 1,71,882
ಇಂಡೋನೇಷಿಯಾ: 1,56,970
ಫ್ರಾನ್ಸ್: 1,51,983

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 8,80,11,783
ಭಾರತ: 4,33,30,442
ಬ್ರೆಜಿಲ್: 3,22,72,604
ಫ್ರಾನ್ಸ್: 3,20,80,026
ಜರ್ಮನಿ: 2,88,63,300
ಯುಕೆ: 2,26,35,341
ಇಟಲಿ: 1,94,57,330
ರಷ್ಯಾ: 1,79,69,342
ಟರ್ಕಿ: 1,54,87,468
ಸ್ಪೇನ್: 1,26,10,266
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+