Infographics: ಜುಲೈ 7ರಂದು ಜಗತ್ತಿನಲ್ಲಿ ಕೋವಿಡ್-19 ಅಂಕಿ-ಅಂಶ ಹೇಗಿದೆ?
ನವದೆಹಲಿ, ಜುಲೈ 7: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಕ್ರಮೇಣ ಏರಿಕೆ ಆಗುತ್ತಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 557,795,591ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,367,372 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 531,655,769 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.
ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ನಾಲ್ಕು ಸಾವಿರದ ಗಡಿ ದಾಟಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜುಲೈ 7ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 18,930 ಮಂದಿಗೆ ಕೊವಿಡ್
ಕೊರೊನಾ ವೈರಸ್ ಹೊಸ ರೂಪಾಂತರ ಮತ್ತು ತಳಿಗಳು ಪತ್ತೆಯಾಗುತ್ತಿರುವುದರ ಮಧ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಭಾರತದಲ್ಲಿ ಒಂದೇ ದಿನ 18,930 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ. ಇದೇ ಅವಧಿಯಲ್ಲಿ 35 ಮಂದಿ ಉಸಿರು ಚೆಲ್ಲಿದ್ದು, 14,650 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಪಾಸಿಟಿವಿಟಿ ದರವು 4.32ರಷ್ಟು ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,19,457ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 43,568,884ಕ್ಕೆ ಏರಿಕೆಯಾಗಿದೆ. ಇದರ ಮಧ್ಯೆ ಇದುವರೆಗೂ 42,921,977 ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಶೇಕಡಾವಾರು ಪ್ರಮಾಣ ಶೇ.98.75ರಷ್ಟಿದೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 525,305 ಮಂದಿ ಪ್ರಾಣ ಬಿಟ್ಟಿದ್ದಾರೆ. ದೇಶದಲ್ಲಿ ಒಟ್ಟು ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 121,602 ಆಗಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 557,795,591 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,367,372 ಮಂದಿ ಪ್ರಾಣ ಬಿಟ್ಟಿದ್ದಾರೆ. 531,655,769 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 19,772,450 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 8,99,30,463
ಭಾರತ: 4,35,68,884
ಬ್ರೆಜಿಲ್: 3,26,87,680
ಫ್ರಾನ್ಸ್: 3,18,13,342
ಜರ್ಮನಿ: 2,88,08,614
ಯುಕೆ: 2,28,83,995
ಇಟಲಿ: 1,90,48,788
ರಷ್ಯಾ: 1,84,48,451
ದಕ್ಷಿಣ ಕೊರಿಯಾ: 1,84,51,862
ಟರ್ಕಿ: 1,51,80,444

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 10,44,557
ಬ್ರೆಜಿಲ್: 6,72,829
ಭಾರತ: 5,25,305
ರಷ್ಯಾ: 3,81,450
ಮೆಕ್ಸಿಕೋ: 3,25,928
ಪೆರು: 2,13,612
ಯುಕೆ: 1,80,718
ಇಟಲಿ: 1,68,770
ಇಂಡೋನೇಷಿಯಾ: 1,56,770
ಫ್ರಾನ್ಸ್: 1,49,854

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 8,55,08,961
ಭಾರತ: 4,29,21,977
ಬ್ರೆಜಿಲ್: 3,10,77,538
ಫ್ರಾನ್ಸ್: 2,98,78,999
ಜರ್ಮನಿ: 2,70,59,700
ಯುಕೆ: 2,19,54,141
ರಷ್ಯಾ: 1,78,80,191
ಇಟಲಿ: 1,77,33,984
ಟರ್ಕಿ: 1,50,35,727
ಸ್ಪೇನ್: 1,22,94,986
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications