Infographics: ಜುಲೈ 8ರಂದು ಜಗತ್ತಿನಲ್ಲಿ ಕೋವಿಡ್-19 ಅಂಕಿ-ಅಂಶ ತಿಳಿಯಿರಿ

ನವದೆಹಲಿ, ಜುಲೈ 8: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಕ್ರಮೇಣ ಏರಿಕೆ ಆಗುತ್ತಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 558,830,377ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,369,483 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 532,289,840 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ನಾಲ್ಕು ಸಾವಿರದ ಗಡಿ ದಾಟಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜುಲೈ 8ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 18,418 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 18,418 ಮಂದಿಗೆ ಕೊವಿಡ್

ಕೊರೊನಾ ವೈರಸ್ ಹೊಸ ರೂಪಾಂತರ ಮತ್ತು ತಳಿಗಳು ಪತ್ತೆಯಾಗುತ್ತಿರುವುದರ ಮಧ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಭಾರತದಲ್ಲಿ ಒಂದೇ ದಿನ 18,418 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 38 ಮಂದಿ ಉಸಿರು ಚೆಲ್ಲಿದ್ದು, 15,899 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 124,083ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 43,587,302ಕ್ಕೆ ಏರಿಕೆಯಾಗಿದೆ. ಇದರ ಮಧ್ಯೆ ಇದುವರೆಗೂ 42,937,876 ಸೋಂಕಿತರು ಗುಣಮುಖರಾಗಿದ್ದಾರೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 525,343 ಮಂದಿ ಪ್ರಾಣ ಬಿಟ್ಟಿದ್ದಾರೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 558,830,377 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,369,483 ಮಂದಿ ಪ್ರಾಣ ಬಿಟ್ಟಿದ್ದಾರೆ. 532,289,840 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 20,171,054 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 9,00,65,165

ಭಾರತ: 4,35,87,302

ಬ್ರೆಜಿಲ್: 3,27,61,045

ಫ್ರಾನ್ಸ್: 3,19,74,607

ಜರ್ಮನಿ: 2,89,26,346

ಯುಕೆ: 2,28,83,995

ಇಟಲಿ: 1,91,57,174

ದಕ್ಷಿಣ ಕೊರಿಯಾ: 1,84,71,172

ರಷ್ಯಾ: 1,84,48,451

ಟರ್ಕಿ: 1,51,80,444

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,45,080

ಬ್ರೆಜಿಲ್: 6,73,126

ಭಾರತ: 5,25,343

ರಷ್ಯಾ: 3,81,499

ಮೆಕ್ಸಿಕೋ: 3,25,976

ಪೆರು: 2,13,623

ಯುಕೆ: 1,80,718

ಇಟಲಿ: 1,68,864

ಇಂಡೋನೇಷಿಯಾ: 1,56,781

ಫ್ರಾನ್ಸ್: 1,49,943

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 8,56,24,982

ಭಾರತ: 4,29,37,876

ಬ್ರೆಜಿಲ್: 3,10,94,805

ಫ್ರಾನ್ಸ್: 2,99,29,515

ಜರ್ಮನಿ: 2,71,35,900

ಯುಕೆ: 2,22,26,563

ರಷ್ಯಾ: 1,78,82,978

ಇಟಲಿ: 1,77,89,613

ಟರ್ಕಿ: 1,50,35,727

ಸ್ಪೇನ್: 1,22,94,986

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+