Infographics: ಜುಲೈ 9ರಂದು ಜಗತ್ತಿನಲ್ಲಿ ಕೋವಿಡ್-19 ಅಂಕಿ-ಅಂಶ ತಿಳಿಯಿರಿ

ನವದೆಹಲಿ, ಜುಲೈ 9: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಕ್ರಮೇಣ ಏರಿಕೆ ಆಗುತ್ತಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 560,006,166ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,371,947 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 532,971,717 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ನಾಲ್ಕು ಸಾವಿರದ ಗಡಿ ದಾಟಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜುಲೈ 9ರ ಪ್ರಕಾರ) ಇಲ್ಲಿದೆ.

Covid 19 Info: Countries With Number of Infected, Deaths, recovered July 9th

ದೇಶದಲ್ಲಿ ಒಂದೇ ದಿನ 17,092 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 17,092 ಮಂದಿಗೆ ಕೊವಿಡ್

ಕೊರೊನಾ ವೈರಸ್ ಹೊಸ ರೂಪಾಂತರ ಮತ್ತು ತಳಿಗಳು ಪತ್ತೆಯಾಗುತ್ತಿರುವುದರ ಮಧ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಭಾರತದಲ್ಲಿ ಒಂದೇ ದಿನ 17,092 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 43 ಮಂದಿ ಉಸಿರು ಚೆಲ್ಲಿದ್ದು, 16,104 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 125,028ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 43,604,394ಕ್ಕೆ ಏರಿಕೆಯಾಗಿದೆ. ಇದರ ಮಧ್ಯೆ ಇದುವರೆಗೂ 42,953,980 ಸೋಂಕಿತರು ಗುಣಮುಖರಾಗಿದ್ದಾರೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 525,386 ಮಂದಿ ಪ್ರಾಣ ಬಿಟ್ಟಿದ್ದಾರೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 560,006,166 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,371,947 ಮಂದಿ ಪ್ರಾಣ ಬಿಟ್ಟಿದ್ದಾರೆ. 532,971,717 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 20,662,502 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 9,02,73,079
ಭಾರತ: 4,36,04,394
ಬ್ರೆಜಿಲ್: 3,28,33,596
ಫ್ರಾನ್ಸ್: 3,21,15,604
ಜರ್ಮನಿ: 2,90,22,265
ಯುಕೆ: 2,28,83,995
ಇಟಲಿ: 1,92,59,037
ದಕ್ಷಿಣ ಕೊರಿಯಾ: 1,84,91,434
ರಷ್ಯಾ: 1,84,55,274
ಟರ್ಕಿ: 1,51,80,444

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಯುಎಸ್ಎ: 10,45,740
ಬ್ರೆಜಿಲ್: 6,73,400
ಭಾರತ: 5,25,386
ರಷ್ಯಾ: 3,81,499
ಮೆಕ್ಸಿಕೋ: 3,26,022
ಪೆರು: 2,13,652
ಯುಕೆ: 1,80,718
ಇಟಲಿ: 1,68,969
ಇಂಡೋನೇಷಿಯಾ: 1,56,785
ಫ್ರಾನ್ಸ್: 1,50,017

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 8,57,16,015
ಭಾರತ: 4,29,53,980
ಬ್ರೆಜಿಲ್: 3,11,19,463
ಫ್ರಾನ್ಸ್: 2,99,79,707
ಜರ್ಮನಿ: 2,71,65,100
ಯುಕೆ: 2,22,36,601
ರಷ್ಯಾ: 1,78,42,978
ಇಟಲಿ: 1,78,42,846
ಟರ್ಕಿ: 1,50,35,727
ಸ್ಪೇನ್: 1,23,19,484
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+