ಜೂನ್ 11ರ ಅಂಕಿ-ಅಂಶ: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?

ನವದೆಹಲಿ, ಜೂನ್ 11: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 539,908,577ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,330,206 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 512,574,175 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ನಾಲ್ಕು ಸಾವಿರದ ಗಡಿ ದಾಟಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜೂನ್ 11ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 4,372 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 4,372 ಮಂದಿಗೆ ಕೊವಿಡ್

ಕಳೆದ 24 ಗಂಟೆಗಳಲ್ಲಿ 4,372 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ. ಕಳೆದೊಂದು ದಿನದಲ್ಲಿ ಕೊರೊನಾವೈರಸ್ ಮಹಾಮಾರಿಯಿಂದ 5 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದೇ ಅವಧಿಯಲ್ಲಿ 2,584 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 43,165,738ಕ್ಕೆ ಏರಿಕೆಯಾಗಿದೆ. ಇದರ ಮಧ್ಯೆ ಇದುವರೆಗೂ 42,620,394 ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಶೇಕಡಾವಾರು ಪ್ರಮಾಣ ಶೇ.98.75ರಷ್ಟಿದೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 524,641 ಮಂದಿ ಪ್ರಾಣ ಬಿಟ್ಟಿದ್ದು, ಮೃತರ ಪ್ರಮಾಣ ಶೇ.1.22ರಷ್ಟಿದೆ. ದೇಶದಲ್ಲಿ ಒಟ್ಟು ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 20,703 ಆಗಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.0.03ರಷ್ಟಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 539,908,577 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,330,206 ಮಂದಿ ಪ್ರಾಣ ಬಿಟ್ಟಿದ್ದಾರೆ. 512,574,175 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 21,004,196 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,72,46,309

ಭಾರತ: 4,32,13,435

ಬ್ರೆಜಿಲ್: 3,14,17,341

ಫ್ರಾನ್ಸ್: 2,97,53,370

ಜರ್ಮನಿ: 2,68,02,782

ಯುಕೆ: 2,23,82,352

ರಷ್ಯಾ: 1,83,73,184

ದಕ್ಷಿಣ ಕೊರಿಯಾ: 1,82,18,078

ಇಟಲಿ: 1,76,11,607

ಟರ್ಕಿ: 1,50,72,747

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,35,675

ಬ್ರೆಜಿಲ್: 6,68,007

ಭಾರತ: 5,24,757

ರಷ್ಯಾ: 3,79,955

ಮೆಕ್ಸಿಕೋ: 3,25,144

ಪೆರು: 2,13,308

ಯುಕೆ: 1,79,217

ಇಟಲಿ: 1,67,305

ಇಂಡೋನೇಷಿಯಾ: 1,56,638

ಫ್ರಾನ್ಸ್: 1,48,710

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 8,30,14,518

ಭಾರತ: 4,26,48,308

ಬ್ರೆಜಿಲ್: 3,01,78,187

ಫ್ರಾನ್ಸ್: 2,91,89,275

ಜರ್ಮನಿ: 2,58,70,800

ಯುಕೆ: 2,20,19,878

ರಷ್ಯಾ: 1,77,91,081

ಟರ್ಕಿ: 1,49,71,256

ಸ್ಪೇನ್: 1,19,39,322

ಅರ್ಜೆಂಟೀನಾ: 88,95,999

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+