ಜೂನ್ 13ರ ಅಂಕಿ-ಅಂಶ: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?
ನವದೆಹಲಿ, ಜೂನ್ 13: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 540,663,117ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,331,768 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 515,983,641 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.
Breaking: ಭಾರತದಲ್ಲಿ ಒಂದೇ ದಿನ 8,329 ಮಂದಿಗೆ ಕೊರೊನಾ ವೈರಸ್!
ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ನಾಲ್ಕು ಸಾವಿರದ ಗಡಿ ದಾಟಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜೂನ್ 13ರ ಪ್ರಕಾರ) ಇಲ್ಲಿದೆ.
ದೇಶದಲ್ಲಿ ಒಂದೇ ದಿನ 9,987 ಮಂದಿಗೆ ಕೊವಿಡ್
ಕಳೆದ 24 ಗಂಟೆಗಳಲ್ಲಿ 9,987 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ. ಕಳೆದೊಂದು ದಿನದಲ್ಲಿ ಕೊರೊನಾವೈರಸ್ ಮಹಾಮಾರಿಯಿಂದ 10 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದೇ ಅವಧಿಯಲ್ಲಿ 4,592 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 43,232,004ಕ್ಕೆ ಏರಿಕೆಯಾಗಿದೆ. ಇದರ ಮಧ್ಯೆ ಇದುವರೆಗೂ 42,657,335 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 524,771 ಮಂದಿ ಪ್ರಾಣ ಬಿಟ್ಟಿದ್ದಾರೆ. ದೇಶದಲ್ಲಿ ಒಟ್ಟು ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 49,898 ಆಗಿದೆ.
ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 540,663,117 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,331,768 ಮಂದಿ ಪ್ರಾಣ ಬಿಟ್ಟಿದ್ದಾರೆ. 515,983,641 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 18,347,708 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.
ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 8,73,21,703
ಭಾರತ: 4,32,32,004
ಬ್ರೆಜಿಲ್: 3,14,56,865
ಫ್ರಾನ್ಸ್: 2,98,49,919
ಜರ್ಮನಿ: 2,68,47,783
ಯುಕೆ: 2,23,82,352
ರಷ್ಯಾ: 1,83,79,583
ದಕ್ಷಿಣ ಕೊರಿಯಾ: 1,82,29,288
ಇಟಲಿ: 1,76,53,375
ಟರ್ಕಿ: 1,50,72,747
ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 10,35,847
ಬ್ರೆಜಿಲ್: 6,68,177
ಭಾರತ: 5,24,771
ರಷ್ಯಾ: 3,80,076
ಮೆಕ್ಸಿಕೋ: 3,25,194
ಪೆರು: 2,13,324
ಯುಕೆ: 1,79,217
ಇಟಲಿ: 1,67,391
ಇಂಡೋನೇಷಿಯಾ: 1,56,643
ಫ್ರಾನ್ಸ್: 1,48,749
ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 8,31,59,792
ಭಾರತ: 4,26,57,335
ಬ್ರೆಜಿಲ್: 3,01,82,173
ಫ್ರಾನ್ಸ್: 2,92,10,587
ಜರ್ಮನಿ: 2,59,39,900
ಯುಕೆ: 2,20,37,192
ರಷ್ಯಾ: 1,77,98,245
ಟರ್ಕಿ: 1,49,71,256
ಸ್ಪೇನ್: 1,19,39,322
ಅರ್ಜೆಂಟೀನಾ: 88,95,999
(ಮಾಹಿತಿ ಕೃಪೆ: ವರ್ಲ್ಡ್ಮೀಟರ್)