ಜೂನ್ 14ರ ಅಂಕಿ-ಅಂಶ: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?

ನವದೆಹಲಿ, ಜೂನ್ 14: ಜಾಗತಿಕ ಮಟ್ಟದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 541,124,794ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,332,729 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 516,481,364 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಭಾರತದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ನಾಲ್ಕು ಸಾವಿರದ ಗಡಿ ದಾಟಿದೆ. ಇದರ ಮಧ್ಯೆ ಕೊರೊನಾ ವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾ ವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜೂನ್ 14ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 4,691 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 4,691 ಮಂದಿಗೆ ಕೊವಿಡ್

ಕಳೆದ 24 ಗಂಟೆಗಳಲ್ಲಿ 4,691 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ. ಕಳೆದೊಂದು ದಿನದಲ್ಲಿ ಕೊರೊನಾ ವೈರಸ್ ಮಹಾಮಾರಿಯಿಂದ 6 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದೇ ಅವಧಿಯಲ್ಲಿ 4,035 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 43,236,695ಕ್ಕೆ ಏರಿಕೆಯಾಗಿದೆ. ಇದರ ಮಧ್ಯೆ ಇದುವರೆಗೂ 42,661,370 ಸೋಂಕಿತರು ಗುಣಮುಖರಾಗಿದ್ದಾರೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 524,777 ಮಂದಿ ಪ್ರಾಣ ಬಿಟ್ಟಿದ್ದಾರೆ. ದೇಶದಲ್ಲಿ ಒಟ್ಟು ಕೊರೊನಾ ವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 50,548 ಆಗಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 541,124,794 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,332,729 ಮಂದಿ ಪ್ರಾಣ ಬಿಟ್ಟಿದ್ದಾರೆ. 516,481,364 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 18,310,701 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,74,24,846

ಭಾರತ: 4,32,36,695

ಬ್ರೆಜಿಲ್: 3,14,97,038

ಫ್ರಾನ್ಸ್: 2,98,58,393

ಜರ್ಮನಿ: 2,68,86,447

ಯುಕೆ: 2,24,10,583

ರಷ್ಯಾ: 1,83,82,380

ದಕ್ಷಿಣ ಕೊರಿಯಾ: 1,82,39,056

ಇಟಲಿ: 1,76,64,043

ಟರ್ಕಿ: 1,50,72,747

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾ ವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,36,084

ಬ್ರೆಜಿಲ್: 6,68,230

ಭಾರತ: 5,24,777

ರಷ್ಯಾ: 3,80,137

ಮೆಕ್ಸಿಕೋ: 3,25,205

ಪೆರು: 2,13,338

ಯುಕೆ: 1,79,274

ಇಟಲಿ: 1,67,432

ಇಂಡೋನೇಷಿಯಾ: 1,56,652

ಫ್ರಾನ್ಸ್: 1,48,841

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾ ವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 8,32,45,798

ಭಾರತ: 4,26,61,370

ಬ್ರೆಜಿಲ್: 3,02,19,236

ಫ್ರಾನ್ಸ್: 2,92,42,524

ಜರ್ಮನಿ: 2,59,99,100

ಯುಕೆ: 2,20,45,389

ರಷ್ಯಾ: 1,78,01,569

ಟರ್ಕಿ: 1,49,71,256

ಸ್ಪೇನ್: 1,19,39,322

ಅರ್ಜೆಂಟೀನಾ: 88,95,999

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+