ಜೂನ್ 15ರ ಅಂಕಿ-ಅಂಶ: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?

ನವದೆಹಲಿ, ಜೂನ್ 15: ಜಾಗತಿಕ ಮಟ್ಟದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 541,883,746ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,334,518 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 517,122,069 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಭಾರತದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ನಾಲ್ಕು ಸಾವಿರದ ಗಡಿ ದಾಟಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜೂನ್ 15ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 8,822 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 8,822 ಮಂದಿಗೆ ಕೊವಿಡ್

ಕಳೆದ 24 ಗಂಟೆಗಳಲ್ಲಿ 8,822 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ. ಕಳೆದೊಂದು ದಿನದಲ್ಲಿ ಕೊರೊನಾ ವೈರಸ್ ಮಹಾಮಾರಿಯಿಂದ 15 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದೇ ಅವಧಿಯಲ್ಲಿ 5,718 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 43,245,517ಕ್ಕೆ ಏರಿಕೆಯಾಗಿದೆ. ಇದರ ಮಧ್ಯೆ ಇದುವರೆಗೂ 42,667,088 ಸೋಂಕಿತರು ಗುಣಮುಖರಾಗಿದ್ದಾರೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 524,792 ಮಂದಿ ಪ್ರಾಣ ಬಿಟ್ಟಿದ್ದಾರೆ. ದೇಶದಲ್ಲಿ ಒಟ್ಟು ಕೊರೊನಾ ವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 53,637 ಆಗಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 541,883,746 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,334,518 ಮಂದಿ ಪ್ರಾಣ ಬಿಟ್ಟಿದ್ದಾರೆ. 517,122,069 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 18,427,159 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,75,49,563

ಭಾರತ: 4,32,45,517

ಬ್ರೆಜಿಲ್: 3,15,43,000

ಫ್ರಾನ್ಸ್: 2,99,23,818

ಜರ್ಮನಿ: 2,69,69,546

ಯುಕೆ: 2,24,22,611

ರಷ್ಯಾ: 1,83,85,098

ದಕ್ಷಿಣ ಕೊರಿಯಾ: 1,82,48,479

ಇಟಲಿ: 1,77,03,887

ಟರ್ಕಿ: 1,50,78,186

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾ ವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,36,483

ಬ್ರೆಜಿಲ್: 6,68,404

ಭಾರತ: 5,24,792

ರಷ್ಯಾ: 3,80,203

ಮೆಕ್ಸಿಕೋ: 3,25,242

ಪೆರು: 2,13,343

ಯುಕೆ: 1,79,363

ಇಟಲಿ: 1,67,505

ಇಂಡೋನೇಷಿಯಾ: 1,56,662

ಫ್ರಾನ್ಸ್: 1,48,898

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾ ವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 8,33,39,680

ಭಾರತ: 4,26,67,088

ಬ್ರೆಜಿಲ್: 3,02,59,452

ಫ್ರಾನ್ಸ್: 2,92,64,473

ಜರ್ಮನಿ: 2,60,49,400

ಯುಕೆ: 2,20,52,904

ರಷ್ಯಾ: 1,78,06,097

ಟರ್ಕಿ: 1,49,79,099

ಸ್ಪೇನ್: 1,20,19,883

ಅರ್ಜೆಂಟೀನಾ: 88,95,999

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+