ಜೂನ್ 17ರ ಅಂಕಿ-ಅಂಶ: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?

ನವದೆಹಲಿ, ಜೂನ್ 17: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 543,316,589ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,338,474 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 518,503,571 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ.

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ನಾಲ್ಕು ಸಾವಿರದ ಗಡಿ ದಾಟಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜೂನ್ 17ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 10,970 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 10,970 ಮಂದಿಗೆ ಕೊವಿಡ್

ಕಳೆದ 24 ಗಂಟೆಗಳಲ್ಲಿ 10,970 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ. ಕಳೆದೊಂದು ದಿನದಲ್ಲಿ ಕೊರೊನಾವೈರಸ್ ಮಹಾಮಾರಿಯಿಂದ 14 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದೇ ಅವಧಿಯಲ್ಲಿ 7,985 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 43,270,577ಕ್ಕೆ ಏರಿಕೆಯಾಗಿದೆ. ಇದರ ಮಧ್ಯೆ ಇದುವರೆಗೂ 42,682,697 ಸೋಂಕಿತರು ಗುಣಮುಖರಾಗಿದ್ದಾರೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 524,817 ಮಂದಿ ಪ್ರಾಣ ಬಿಟ್ಟಿದ್ದಾರೆ. ದೇಶದಲ್ಲಿ ಒಟ್ಟು ಕೊರೊನಾವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 63,063 ಆಗಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 543,316,589 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,338,474 ಮಂದಿ ಪ್ರಾಣ ಬಿಟ್ಟಿದ್ದಾರೆ. 518,503,571 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 18,474,544 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,78,61,132

ಭಾರತ: 4,26,82,697

ಬ್ರೆಜಿಲ್: 3,16,44,703

ಫ್ರಾನ್ಸ್: 3,00,28,853

ಜರ್ಮನಿ: 2,70,95,988

ಯುಕೆ: 2,24,60,449

ರಷ್ಯಾ: 1,83,91,797

ದಕ್ಷಿಣ ಕೊರಿಯಾ: 1,82,63,643

ಇಟಲಿ: 1,77,73,764

ಟರ್ಕಿ: 1,50,85,742

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,37,928

ಬ್ರೆಜಿಲ್: 6,68,892

ಭಾರತ: 5,24,817

ರಷ್ಯಾ: 3,80,333

ಮೆಕ್ಸಿಕೋ: 3,25,340

ಪೆರು: 2,13,361

ಯುಕೆ: 1,79,472

ಇಟಲಿ: 1,67,617

ಇಂಡೋನೇಷಿಯಾ: 1,56,679

ಫ್ರಾನ್ಸ್: 1,48,996

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 8,36,11,613

ಭಾರತ: 4,26,82,697

ಬ್ರೆಜಿಲ್: 3,03,10,772

ಫ್ರಾನ್ಸ್: 2,92,90,420

ಜರ್ಮನಿ: 2,61,32,100

ಯುಕೆ: 2,20,65,350

ರಷ್ಯಾ: 1,78,15,024

ಟರ್ಕಿ: 1,49,86,340

ಸ್ಪೇನ್: 1,20,19,883

ಅರ್ಜೆಂಟೀನಾ: 90,72,083

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+