ಜೂನ್ 1ರ ಅಂಕಿ-ಅಂಶ: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್ ಸೋಂಕಿತರು ಗುಣಮುಖ?

ನವದೆಹಲಿ, ಜೂನ್ 1: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ತಗ್ಗಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 532,954,980ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,314,058 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 504,042,241 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಚಿತ್ರಣ ಬದಲಾಗಿದೆ. ಒಂದು ದಿನದಲ್ಲಿ ದಾಖಲಾಗುತ್ತಿದ್ದ ಪ್ರಕರಣಗಳ ಸಂಖ್ಯೆಯು ಒಂದು ಸಾವಿರದ ಆಸುಪಾಸಿಗೆ ಬಂದು ನಿಂತಿದೆ.

ಇದರ ಮಧ್ಯೆ ಕೊರೊನಾ ವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಜೂನ್ 1ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 2,784 ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 2,784 ಮಂದಿಗೆ ಕೊವಿಡ್

ಕಳೆದ 24 ಗಂಟೆಗಳಲ್ಲಿ 2,784 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪಕ್ಕಾ ಆಗಿದೆ. ಕಳೆದೊಂದು ದಿನದಲ್ಲಿ ಕೊರೊನಾವೈರಸ್ ಮಹಾಮಾರಿಯಿಂದ 6 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದೇ ಅವಧಿಯಲ್ಲಿ 2,236 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 43,161,366ಕ್ಕೆ ಏರಿಕೆಯಾಗಿದೆ. ಇದರ ಮಧ್ಯೆ ಇದುವರೆಗೂ 42,617,810 ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಶೇಕಡಾವಾರು ಪ್ರಮಾಣ ಶೇ.98.75ರಷ್ಟಿದೆ. ಅದೇ ರೀತಿ ಮಹಾಮಾರಿ ಕೋವಿಡ್-19 ಸೋಂಕಿಗೆ ದೇಶದಲ್ಲಿ ಇದುವರೆಗೂ 524,636 ಮಂದಿ ಪ್ರಾಣ ಬಿಟ್ಟಿದ್ದು, ಮೃತರ ಪ್ರಮಾಣ ಶೇ.1.22ರಷ್ಟಿದೆ. ದೇಶದಲ್ಲಿ ಒಟ್ಟು ಕೊರೊನಾ ವೈರಸ್ ಸಕ್ರಿಯ ಪ್ರಕರಣಗಳ ಸಂಖ್ಯೆ 18,920 ಆಗಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.0.03ರಷ್ಟಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 532,954,980 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,314,058 ಮಂದಿ ಪ್ರಾಣ ಬಿಟ್ಟಿದ್ದಾರೆ. 504,042,241 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 22,598,681 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೋವಿಡ್-19 ಬಾಧಿತ ಟಾಪ್ 10 ದೇಶಗಳು

ಕೋವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,59,01,797

ಭಾರತ: 4,31,61,366

ಬ್ರೆಜಿಲ್: 3,10,19,038

ಫ್ರಾನ್ಸ್: 2,95,19,253

ಜರ್ಮನಿ: 2,63,69,774

ಯುಕೆ: 2,23,00,587

ರಷ್ಯಾ: 1,83,31,363

ದಕ್ಷಿಣ ಕೊರಿಯಾ: 1,81,19,415

ಇಟಲಿ: 1,74,21,410

ಟರ್ಕಿ: 1,50,72,747

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾ ವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 10,31,613

ಬ್ರೆಜಿಲ್: 6,66,727

ಭಾರತ: 5,24,636

ರಷ್ಯಾ: 3,79,117

ಮೆಕ್ಸಿಕೋ: 3,24,895

ಪೆರು: 2,13,195

ಯುಕೆ: 1,78,659

ಇಟಲಿ: 1,66,697

ಇಂಡೋನೇಷಿಯಾ: 1,56,591

ಫ್ರಾನ್ಸ್: 1,48,327

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾ ವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 8,22,39,607

ಭಾರತ: 4,26,15,574

ಬ್ರೆಜಿಲ್: 3,00,17,810

ಫ್ರಾನ್ಸ್: 2,89,13,196

ಜರ್ಮನಿ: 2,53,91,200

ಯುಕೆ: 2,19,35,126

ರಷ್ಯಾ: 1,77,39,356

ಟರ್ಕಿ: 1,49,71,256

ಸ್ಪೇನ್: 1,17,89,659

ಅರ್ಜೆಂಟೀನಾ: 88,95,999

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+