ಮಾ.12: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊರೊನಾವೈರಸ್ ಸೋಂಕಿತರು ಗುಣಮುಖ?

ನವದೆಹಲಿ, ಮಾರ್ಚ್ 12: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಬಹುಪಾಲು ನಿಯಂತ್ರಣ ಬಂದಿದೆ. ಅದಾಗ್ಯೂ, ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 455,969,731ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,059,991ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 389,723,485 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 39 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿವೆ.

ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಶುರುವಾಗಿದೆ. ದೇಶದಲ್ಲಿ ಈಗಾಗಲೇ ದೈನಂದಿನ ಸೋಂಕಿತ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಮಾರ್ಚ್ 12ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 3 ಸಾವಿರ ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 3 ಸಾವಿರ ಮಂದಿಗೆ ಕೊವಿಡ್

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ತಗ್ಗಿದೆ. ಭಾರತದಲ್ಲಿ ಒಂದು ದಿನದಲ್ಲಿ 4 ಸಾವಿರಕ್ಕಿಂತ ಕಡಿಮೆ ಪ್ರಕರಣಗಳು ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ 3,614 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 88 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 5,185 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 42,987,875ಕ್ಕೆ ಏರಿಕೆಯಾಗಿದೆ. ಈ ಪೈಕಿ 42,431,513 ಸೋಂಕಿತರು ಗುಣಮುಖರಾಗಿದ್ದರೆ, 515,833 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 40,529 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 455,969,731 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,059,991 ಮಂದಿ ಪ್ರಾಣ ಬಿಟ್ಟಿದ್ದಾರೆ. 389,723,485 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 60,186,255 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,11,54,960

ಭಾರತ: 4,29,87,875

ಬ್ರೆಜಿಲ್: 2,93,05,114

ಫ್ರಾನ್ಸ್: 2,33,81,279

ಯುಕೆ: 1,95,30,485

ರಷ್ಯಾ: 1,72,90,197

ಜರ್ಮನಿ: 1,68,81,948

ಟರ್ಕಿ: 1,45,13,774

ಇಟಲಿ: 1,32,68,459

ಸ್ಪೇನ್: 1,12,23,974

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 9,93,044

ಬ್ರೆಜಿಲ್: 6,54,612

ಭಾರತ: 5,15,833

ರಷ್ಯಾ: 3,60,215

ಮೆಕ್ಸಿಕೋ: 3,20,851

ಪೆರು: 2,11,423

ಯುಕೆ: 1,62,738

ಇಟಲಿ: 1,56,649

ಇಂಡೋನೇಷಿಯಾ: 1,51,703

ಫ್ರಾನ್ಸ್: 1,40,029

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 5,57,57,373

ಭಾರತ: 4,24,31,513

ಬ್ರೆಜಿಲ್: 2,75,56,598

ಫ್ರಾನ್ಸ್: 2,20,87,797

ಯುಕೆ: 1,82,29,317

ಟರ್ಕಿ: 1,40,65,761

ರಷ್ಯಾ: 1,53,51,778

ಜರ್ಮನಿ: 1,32,73.700

ಅರ್ಜೆಂಟೀನಾ: 87,62,697

ಇರಾನ್: 67,68,271

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+