ಮಾ.14: ಭಾರತ, ಅಮೆರಿಕಾದಲ್ಲಿ ತಗ್ಗಿದ ಕೊವಿಡ್; ಯಾವ ದೇಶದಲ್ಲಿ ಗುಣಮುಖರ ಸಂಖ್ಯೆ ಎಷ್ಟು?

ನವದೆಹಲಿ, ಮಾರ್ಚ್ 14: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಬಹುಪಾಲು ನಿಯಂತ್ರಣ ಬಂದಿದೆ. ಅದಾಗ್ಯೂ, ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ವಿಶ್ವದೆಲ್ಲೆಡೆ ಒಟ್ಟು 458,713,563ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,067,226ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 392,140,531 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 5 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿವೆ.

ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಶುರುವಾಗಿದೆ. ದೇಶದಲ್ಲಿ ಈಗಾಗಲೇ ದೈನಂದಿನ ಸೋಂಕಿತ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಮಾರ್ಚ್ 14ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 2 ಸಾವಿರ ಮಂದಿಗೆ ಕೊವಿಡ್

ದೇಶದಲ್ಲಿ ಒಂದೇ ದಿನ 2 ಸಾವಿರ ಮಂದಿಗೆ ಕೊವಿಡ್

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ತಗ್ಗಿದೆ. ಭಾರತದಲ್ಲಿ ಒಂದು ದಿನದಲ್ಲಿ 2 ಸಾವಿರಕ್ಕಿಂತ ಕಡಿಮೆ ಪ್ರಕರಣಗಳು ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ 2,503 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 57 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 4,377 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 42,993,494ಕ್ಕೆ ಏರಿಕೆಯಾಗಿದೆ. ಈ ಪೈಕಿ 42,441,449 ಸೋಂಕಿತರು ಗುಣಮುಖರಾಗಿದ್ದರೆ, 515,907 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 36,138 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?

ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 458,713,563 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,067,226 ಮಂದಿ ಪ್ರಾಣ ಬಿಟ್ಟಿದ್ದಾರೆ. 392,140,531 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 60,505,806 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಕೊವಿಡ್-19 ಬಾಧಿತ ಟಾಪ್ 10 ದೇಶಗಳು

ಯುಎಸ್ಎ: 8,11,74,677

ಭಾರತ: 4,29,93,494

ಬ್ರೆಜಿಲ್: 2,93,68,776

ಫ್ರಾನ್ಸ್: 2,35,14,144

ಯುಕೆ: 1,95,30,485

ರಷ್ಯಾ: 1,73,35,186

ಜರ್ಮನಿ: 1,72,40,479

ಟರ್ಕಿ: 1,45,51,665

ಇಟಲಿ: 1,33,73,207

ಸ್ಪೇನ್: 1,12,23,974

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:

ಯುಎಸ್ಎ: 9,93,811

ಬ್ರೆಜಿಲ್: 6,55,139

ಭಾರತ: 5,15,907

ರಷ್ಯಾ: 3,60,811

ಮೆಕ್ಸಿಕೋ: 3,21,103

ಪೆರು: 2,11,546

ಯುಕೆ: 1,62,738

ಇಟಲಿ: 1,56,649

ಇಂಡೋನೇಷಿಯಾ: 1,52,166

ಫ್ರಾನ್ಸ್: 1,40,109

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು

ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:

ಯುಎಸ್ಎ: 5,60,71,103

ಭಾರತ: 4,24,41,449

ಬ್ರೆಜಿಲ್: 2,77,42,324

ಫ್ರಾನ್ಸ್: 2,22,61,297

ಯುಕೆ: 1,82,29,317

ಟರ್ಕಿ: 1,41,44,080

ರಷ್ಯಾ: 1,54,80,407

ಜರ್ಮನಿ: 1,35,01,400

ಅರ್ಜೆಂಟೀನಾ: 87,76,700

ಇರಾನ್: 67,79,949

(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+