ಮಾ.15: ಭಾರತ, ಅಮೆರಿಕಾದಲ್ಲಿ ತಗ್ಗಿದ ಕೊವಿಡ್; ಯಾವ ದೇಶದಲ್ಲಿ ಗುಣಮುಖರ ಸಂಖ್ಯೆ ಎಷ್ಟು?
ನವದೆಹಲಿ, ಮಾರ್ಚ್ 15: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಬಹುಪಾಲು ನಿಯಂತ್ರಣ ಬಂದಿದೆ. ಅದಾಗ್ಯೂ, ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 460,844,076ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,069,430 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 394,037,737 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 17 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿವೆ.
ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಶುರುವಾಗಿದೆ. ದೇಶದಲ್ಲಿ ಈಗಾಗಲೇ ದೈನಂದಿನ ಸೋಂಕಿತ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಮಾರ್ಚ್ 15ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 2 ಸಾವಿರ ಮಂದಿಗೆ ಕೊವಿಡ್
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ತಗ್ಗಿದೆ. ಭಾರತದಲ್ಲಿ ಒಂದು ದಿನದಲ್ಲಿ 2 ಸಾವಿರಕ್ಕಿಂತ ಕಡಿಮೆ ಪ್ರಕರಣಗಳು ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ 2,568 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 98 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 4,722 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 42,996,062ಕ್ಕೆ ಏರಿಕೆಯಾಗಿದೆ. ಈ ಪೈಕಿ 42,446,171 ಸೋಂಕಿತರು ಗುಣಮುಖರಾಗಿದ್ದರೆ, 516,005 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 33,886 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 460,844,076 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,069,430 ಮಂದಿ ಪ್ರಾಣ ಬಿಟ್ಟಿದ್ದಾರೆ. 394,037,737 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 60,736,909 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 8,12,16,268
ಭಾರತ: 4,29,96,062
ಬ್ರೆಜಿಲ್: 2,93,82,196
ಫ್ರಾನ್ಸ್: 2,35,32,997
ಯುಕೆ: 1,97,00,952
ರಷ್ಯಾ: 1,74,12,918
ಜರ್ಮನಿ: 1,73,42,351
ಟರ್ಕಿ: 1,45,76,069
ಇಟಲಿ: 1,34,02,905
ಸ್ಪೇನ್: 1,12,23,974

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 9,91,038
ಬ್ರೆಜಿಲ್: 6,55,326
ಭಾರತ: 5,16,006
ರಷ್ಯಾ: 3,61,902
ಮೆಕ್ಸಿಕೋ: 3,21,115
ಪೆರು: 2,11,579
ಯುಕೆ: 1,62,873
ಇಟಲಿ: 1,56,997
ಇಂಡೋನೇಷಿಯಾ: 1,52,437
ಫ್ರಾನ್ಸ್: 1,40,294

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 5,62,82,006
ಭಾರತ: 4,24,46,171
ಬ್ರೆಜಿಲ್: 2,78,38,793
ಫ್ರಾನ್ಸ್: 2,22,61,112
ಯುಕೆ: 1,83,78,375
ಟರ್ಕಿ: 1,41,82,892
ರಷ್ಯಾ: 1,57,04,022
ಜರ್ಮನಿ: 1,37,14,200
ಅರ್ಜೆಂಟೀನಾ: 87,8,575
ಇರಾನ್: 67,85,933
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications