ಮಾ.18: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೋವಿಡ್-19 ಸೋಂಕಿತರುಗುಣಮುಖ?
ನವದೆಹಲಿ, ಮಾರ್ಚ್ 18: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಬಹುಪಾಲು ನಿಯಂತ್ರಣ ಬಂದಿದೆ. ಅದಾಗ್ಯೂ, ಜಗತ್ತಿನಲ್ಲಿ ವರದಿ ಆಗುತ್ತಿರುವ ಕೋವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 466,685,502ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,089,256 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 398,387,083 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 35 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿವೆ.
ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಶುರುವಾಗಿದೆ. ದೇಶದಲ್ಲಿ ಈಗಾಗಲೇ ದೈನಂದಿನ ಸೋಂಕಿತ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಮಾರ್ಚ್ 18ರ ಪ್ರಕಾರ) ಇಲ್ಲಿದೆ.

ದೇಶದಲ್ಲಿ ಒಂದೇ ದಿನ 2 ಸಾವಿರ ಮಂದಿಗೆ ಕೋವಿಡ್
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ತಗ್ಗಿದೆ. ಭಾರತದಲ್ಲಿ ಒಂದು ದಿನದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ 2 ಸಾವಿರಕ್ಕಿಂತ ಕೊಂಚ ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ 2,528 ಮಂದಿಗೆ ಕೋವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 150 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 3,997 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 43,004,005ಕ್ಕೆ ಏರಿಕೆಯಾಗಿದೆ. ಈ ಪೈಕಿ 42,458,543 ಸೋಂಕಿತರು ಗುಣಮುಖರಾಗಿದ್ದರೆ, 516,312 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 29,150 ಕೋವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೋವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 466,685,502 ಕೋವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,089,256 ಮಂದಿ ಪ್ರಾಣ ಬಿಟ್ಟಿದ್ದಾರೆ. 398,387,083 ಕೋವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 62,209,163 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೋವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೋವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 8,13,50,883
ಭಾರತ: 4,30,04,005
ಬ್ರೆಜಿಲ್: 2,95,27,640
ಫ್ರಾನ್ಸ್: 2,38,60,194
ಯುಕೆ: 2,00,01,627
ಜರ್ಮನಿ: 1,81,40,525
ರಷ್ಯಾ: 1,75,18,699
ಟರ್ಕಿ: 1,46,44,382
ಇಟಲಿ: 1,36,45,834
ಸ್ಪೇನ್: 1,12,60,040

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 9,96,072
ಬ್ರೆಜಿಲ್: 6,56,487
ಭಾರತ: 5,16,162
ರಷ್ಯಾ: 3,63,563
ಮೆಕ್ಸಿಕೋ: 3,21,806
ಪೆರು: 2,11,691
ಯುಕೆ: 1,63,386
ಇಟಲಿ: 1,57,442
ಇಂಡೋನೇಷಿಯಾ: 1,53,212
ಫ್ರಾನ್ಸ್: 1,40,729

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 5,68,22,580
ಭಾರತ: 4,24,58,543
ಬ್ರೆಜಿಲ್: 2,81,26,647
ಫ್ರಾನ್ಸ್: 2,24,52,280
ಯುಕೆ: 1,85,07,001
ಟರ್ಕಿ: 1,42,71,428
ರಷ್ಯಾ: 1,60,39,709
ಜರ್ಮನಿ: 1,43,23,500
ಅರ್ಜೆಂಟೀನಾ: 87,97,548
ಇರಾನ್: 68,05,081
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications