ಮಾ.2: ಜಗತ್ತಿನ ಯಾವ ದೇಶದಲ್ಲಿ ಎಷ್ಟು ಕೊರೊನಾವೈರಸ್ ಸೋಂಕಿತರು ಗುಣಮುಖ?
ಬೆಂಗಳೂರು, ಮಾರ್ಚ್ 2: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ದಿನದಿಂದ ದಿನಕ್ಕೆ ನಿಯಂತ್ರಣಕ್ಕೆ ಬರುತ್ತಿದೆ. ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 439,399,266ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 5,987,005 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 372,030,615 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 41 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿವೆ.
ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಶುರುವಾಗಿದೆ. ದೇಶದಲ್ಲಿ ಈಗಾಗಲೇ ದೈನಂದಿನ ಸೋಂಕಿತ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್‌ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಮಾರ್ಚ್ 2ರ ಪ್ರಕಾರ) ಇಲ್ಲಿದೆ.


ದೇಶದಲ್ಲಿ ಒಂದೇ ದಿನ 7 ಸಾವಿರ ಮಂದಿಗೆ ಕೊವಿಡ್
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ತಗ್ಗಿದೆ. ಭಾರತದಲ್ಲಿ ಒಂದು ದಿನದಲ್ಲಿ 7 ಸಾವಿರ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ 7,554 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 192 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 14,123 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 42,938,599ಕ್ಕೆ ಏರಿಕೆಯಾಗಿದೆ. ಈ ಪೈಕಿ 42,338,673 ಸೋಂಕಿತರು ಗುಣಮುಖರಾಗಿದ್ದರೆ, 514,246 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 85,680 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 439,399,266 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 5,987,005 ಮಂದಿ ಪ್ರಾಣ ಬಿಟ್ಟಿದ್ದಾರೆ. 372,030,615 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 61,381,646 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.

ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 8,06,97,924
ಭಾರತ: 4,29,38,599
ಬ್ರೆಜಿಲ್: 2,88,11,165
ಫ್ರಾನ್ಸ್: 2,26,89,332
ಯುಕೆ: 1,89,85,568
ರಷ್ಯಾ: 1,64,95,369
ಜರ್ಮನಿ: 1,49,74,713
ಟರ್ಕಿ: 1,41,49,341
ಇಟಲಿ: 1,28,29,972
ಸ್ಪೇನ್: 1,10,36,085

ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 9,77,402
ಬ್ರೆಜಿಲ್: 6,49,717
ಭಾರತ: 5,14,246
ರಷ್ಯಾ: 3,52,446
ಮೆಕ್ಸಿಕೋ: 3,18,531
ಪೆರು: 2,10,744
ಯುಕೆ: 1,61,630
ಇಟಲಿ: 1,55,000
ಇಂಡೋನೇಷಿಯಾ: 1,48,660
ಫ್ರಾನ್ಸ್: 1,38,576

ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 5,37,30,805
ಭಾರತ: 4,23,38,673
ಬ್ರೆಜಿಲ್: 2,65,06,005
ಫ್ರಾನ್ಸ್: 2,10,80,677
ಯುಕೆ: 1,75,37,214
ಟರ್ಕಿ: 1,34,37,729
ರಷ್ಯಾ: 1,37,48,465
ಜರ್ಮನಿ: 1,14,70,300
ಅರ್ಜೆಂಟೀನಾ: 86,88,724
ಇರಾನ್: 66,65,702
(ಮಾಹಿತಿ ಕೃಪೆ: ವರ್ಲ್ಡ್‌ಮೀಟರ್)












Click it and Unblock the Notifications