ಮಾ.21: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್-19 ಸೋಂಕಿತರುಗುಣಮುಖ?
ನವದೆಹಲಿ, ಮಾರ್ಚ್ 21: ಜಾಗತಿಕ ಮಟ್ಟದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಾವಳಿ ಬಹುಪಾಲು ನಿಯಂತ್ರಣ ಬಂದಿದೆ. ಅದಾಗ್ಯೂ, ಜಗತ್ತಿನಲ್ಲಿ ವರದಿ ಆಗುತ್ತಿರುವ ಕೊವಿಡ್-19 ಪ್ರಕರಣಗಳು, ಒಟ್ಟು ಸಕ್ರಿಯ ಸೋಂಕಿತರು, ಮರಣ ಹೊಂದಿದವರು, ಗುಣಮುಖರಾದವರ ಅಂಕಿ ಅಂಶಗಳ ಕುರಿತು ಸಂಪೂರ್ಣ ವಿವರ ಇಲ್ಲಿದೆ.
ವಿಶ್ವದೆಲ್ಲೆಡೆ ಒಟ್ಟು 471,587,481ಕ್ಕೂ ಅಧಿಕ ಸೋಂಕಿತ ಪ್ರಕರಣಗಳು ವರದಿಯಾಗಿದ್ದು 6,102,570 ಮಂದಿ ಸೋಂಕಿತರು ಸಾವಿನ ಮನೆ ಸೇರಿದ್ದಾರೆ. ಜಾಗತಿಕವಾಗಿ ಈವರೆಗೆ 407,711,190 ಪ್ರಕರಣಗಳಲ್ಲಿ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 5 ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿವೆ.
ಮಾ.19: ವಿಶ್ವದ ಯಾವ ದೇಶದಲ್ಲಿ ಎಷ್ಟು ಕೊವಿಡ್-19 ಸೋಂಕಿತರು ಗುಣಮುಖ?
ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆ ಶುರುವಾಗಿದೆ. ದೇಶದಲ್ಲಿ ಈಗಾಗಲೇ ದೈನಂದಿನ ಸೋಂಕಿತ ಪ್ರಕರಣಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದರ ಮಧ್ಯೆ ಕೊರೊನಾವೈರಸ್ ಬಾಧಿತ ಟಾಪ್ 10 ದೇಶಗಳು, ಕೊರೊನಾವೈರಸ್ನಿಂದ ಅತಿ ಹೆಚ್ಚು ಮೃತಪಟ್ಟವರು, ಅತಿ ಹೆಚ್ಚು ಚೇತರಿಕೆಗೊಂಡವರನ್ನು ಹೊಂದಿರುವ ಟಾಪ್10 ದೇಶಗಳ ವಿವರ (ಮಾರ್ಚ್ 21ರ ಪ್ರಕಾರ) ಇಲ್ಲಿದೆ.
ದೇಶದಲ್ಲಿ ಒಂದೇ ದಿನ 1549 ಮಂದಿಗೆ ಕೊವಿಡ್
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ತಗ್ಗಿದೆ. ಭಾರತದಲ್ಲಿ ಒಂದು ದಿನದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ ಒಂದೂವರೆ ಸಾವಿರಕ್ಕೆ ಇಳಿದಿದೆ. ಕಳೆದ 24 ಗಂಟೆಗಳಲ್ಲಿ 1549 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 6 ಮಂದಿ ಮಹಾಮಾರಿಗೆ ಬಲಿಯಾಗಿದ್ದು, 2652 ಸೋಂಕಿತರು ಗುಣಮುಖರಾಗಿದ್ದಾರೆ. ಇದರ ಹೊರತಾಗಿ ದೇಶದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 43,009,390ಕ್ಕೆ ಏರಿಕೆಯಾಗಿದೆ. ಈ ಪೈಕಿ 42,467,774 ಸೋಂಕಿತರು ಗುಣಮುಖರಾಗಿದ್ದರೆ, 516,516 ಮಂದಿ ಸೋಂಕಿನಿಂದ ಪ್ರಾಣ ಬಿಟ್ಟಿದ್ದಾರೆ. 25,100 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ವಿಶ್ವದಲ್ಲಿ ಹೇಗಿದೆ ಕೊವಿಡ್-19 ಲೆಕ್ಕಾಚಾರ?
ವಿಶ್ವದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹಲವು ರಾಷ್ಟ್ರಗಳಲ್ಲಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಜಗತ್ತಿನಲ್ಲಿ ಈವರೆಗೂ 471,587,481 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಮಹಾಮಾರಿಗೆ ಈವರೆಗೂ 6,102,570 ಮಂದಿ ಪ್ರಾಣ ಬಿಟ್ಟಿದ್ದಾರೆ. 407,711,190 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದರೆ, ಇನ್ನೂ 57,773,721 ಸಕ್ರಿಯ ಪ್ರಕರಣಗಳಿವೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ. ಇದರ ಹೊರತಾಗಿ ಅತಿಹೆಚ್ಚು ಕೊವಿಡ್-19 ಬಾಧಿತ, ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ, ಅತಿಹೆಚ್ಚು ಗುಣಮುಖರ ಸಂಖ್ಯೆಯನ್ನು ದಾಖಲಿಸಿರುವ ಟಾಪ್-10 ರಾಷ್ಟ್ರಗಳ ವಿವರವನ್ನು ಮುಂದೆ ನೋಡೋಣ.
ಕೊವಿಡ್-19 ಬಾಧಿತ ಟಾಪ್ 10 ದೇಶಗಳು
ಯುಎಸ್ಎ: 8,14,10,101
ಭಾರತ: 4,30,09,390
ಬ್ರೆಜಿಲ್: 2,96,30,484
ಫ್ರಾನ್ಸ್: 2,41,37,160
ಯುಕೆ: 2,00,93,762
ಜರ್ಮನಿ: 1,86,83,287
ರಷ್ಯಾ: 1,76,11,401
ಟರ್ಕಿ: 1,46,93,917
ಇಟಲಿ: 1,38,61,743
ಸ್ಪೇನ್: 1,13,24,637
ಅತಿಹೆಚ್ಚು ಸಾವಿನ ಪ್ರಕರಣ ದಾಖಲಿಸಿದ ಟಾಪ್-19 ರಾಷ್ಟ್ರಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಮೃತಪಟ್ಟವರನ್ನು ಹೊಂದಿರುವ ಟಾಪ್ 10 ದೇಶಗಳು:
ಯುಎಸ್ಎ: 9,97,933
ಬ್ರೆಜಿಲ್: 6,57,261
ಭಾರತ: 5,16,516
ರಷ್ಯಾ: 3,64,901
ಮೆಕ್ಸಿಕೋ: 3,22,092
ಪೆರು: 2,11,865
ಯುಕೆ: 1,63,511
ಇಟಲಿ: 1,57,785
ಇಂಡೋನೇಷಿಯಾ: 1,53,738
ಫ್ರಾನ್ಸ್: 1,40,933
ಅತಿಹೆಚ್ಚು ಗುಣಮುಖ ಸಂಖ್ಯೆಯನ್ನು ಹೊಂದಿರುವ ದೇಶಗಳು
ಕೊರೊನಾವೈರಸ್ ಸೋಂಕಿನಿಂದ ಅತಿ ಹೆಚ್ಚು ಗುಣಮುಖರಾದವರನ್ನು ಹೊಂದಿರುವ ಟಾಪ್ 10 ದೇಶ:
ಯುಎಸ್ಎ: 6,30,06,762
ಭಾರತ: 4,24,61,926
ಬ್ರೆಜಿಲ್: 2,81,87,353
ಫ್ರಾನ್ಸ್: 2,25,61,882
ಯುಕೆ: 1,85,41,447
ಟರ್ಕಿ: 1,43,24,234
ರಷ್ಯಾ: 1,62,71,880
ಜರ್ಮನಿ: 1,46,80,700
ಅರ್ಜೆಂಟೀನಾ: 88,12,506
ಇರಾನ್: 68,22,521
(ಮಾಹಿತಿ ಕೃಪೆ: ವರ್ಲ್ಡ್ಮೀಟರ್)